ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಚಿವ ಈಶ್ವರಪ್ಪ ರಾಜೀನಾಮೆಗೆ ಮೂಡುಬಿದಿರೆ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ

ಮೂಡುಬಿದಿರೆ: ಕೆಂಪುಕೋಟೆ ಮೇಲೆ ಧ್ವಜ ಹಾರಿಸುವ ಕುರಿತು ಹೇಳಿಕೆ ನೀಡಿದ್ದ ಸಚಿವ ಕೆ.ಎಸ್. ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ, ಅವರ ಮೇಲೆ ದೇಶದ್ರೋಹದ ಕೇಸ್ ದಾಖಲಿಸುವಂತೆ ಒತ್ತಾಯಿಸಿ, ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆಯು ತಾಲೂಕು ಕಚೇರಿ ಎದುರು ಶುಕ್ರವಾರದಂದು ಬಳಿ ನಡೆಯಿತು.

ಈ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಯುವ ಮುಖಂಡ ಅಧ್ಯಕ್ಷ ಮಿಥುನ್ ರೈ, ದೇಶದ್ರೋಹಿ ಮಾತನ್ನು ಆಡಿದ ಈಶ್ವರಪ್ಪ ಅವರು ಕೆಂಪು ಕೋಟೆಯಲ್ಲಿ ರಾಷ್ಟ್ರ ಧ್ವಜವನ್ನು ಇಳಿಸಿ ಕೇಸರಿ ಧ್ವಜವನ್ನು ಹಾರಿಸುತ್ತೇವೆ ಎಂಬ ಹೇಳಿಕೆ ನೀಡಿರುವುದು ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದಂತೆ. ಬಿಜೆಪಿಯವರು ಏರಿಸುವ ಕೇಸರಿ ಧ್ವಜವನ್ನು ಇಳಿಸಿ ನಾವು ರಾಷ್ಟ್ರ ಧ್ವಜವನ್ನು ಹಾರಿಸುವ ಮೂಲಕ ನಮ್ಮ ರಾಷ್ಟ್ರ ಪ್ರೇಮವನ್ನು ನಾವು ತೋರಿಸುವುದು ಖಂಡಿತ ಎಂದು ಸವಾಲನ್ನೆಸೆದರು.

ಈಶ್ವರಪ್ಪ ಅವರ ಪ್ರತಿಕೃತಿಗೆ ಕಾಂಗ್ರೆಸ್ ಬೆಂಬಲಿಗರು ಚಪ್ಪಲಿಯಿಂದ ಹೊಡೆದು ದಹಿಸಿದರು. ತಹಶೀಲ್ದಾರ್ ಪುಟ್ಟರಾಜು ಅವರ ಮೂಲಕ ಮನವಿಯನ್ನು ಸಲ್ಲಿಸಲಾಯಿತು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ಯುವ ಕಾಂಗ್ರೆಸ್ ಅಧ್ಯಕ್ಷ ಜಯಕುಮಾರ್ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಪ್ರಿಯಾ ಶೆಟ್ಟಿ, ವಾಲ್ಪಾಡಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಪುರಸಭಾ ಸದಸ್ಯರಾದ ಸುರೇಶ್ ಕೋಟ್ಯಾನ್, ಕೊರಗಪ್ಪ, ಜೊಸ್ಸಿ ಮಿನೇಜಸ್, ಸದಸ್ಯರಾದ ಮುರಳೀಧರ ಕೋಟ್ಯಾನ್, ಯುವ ಕಾಂಗ್ರೆಸ್ ಅಧ್ಯಕ್ಷ ಚಂದ್ರಹಾಸ ಸನಿಲ್ ಮತ್ತಿತರರು ಪ್ರತಿಭಟನೆಯಲ್ಲಿ ಇದ್ದರು.

Edited By : Nagesh Gaonkar
Kshetra Samachara

Kshetra Samachara

18/02/2022 06:15 pm

Cinque Terre

3.66 K

Cinque Terre

0

ಸಂಬಂಧಿತ ಸುದ್ದಿ