ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ನಾಳೆ ಕಂದಾಯ ಸಚಿವರ ಗ್ರಾಮ ವಾಸ್ತವ್ಯ:ಸದುಪಯೋಗಪಡಿಸಿಕೊಳ್ಳಲು ಶಾಸಕರ ಮನವಿ

ಉಡುಪಿ: "ಸರ್ಕಾರದ ನಡೆ ಹಳ್ಳಿ ಕಡೆಗೆ" ಕಾರ್ಯಕ್ರಮದ ಅಂಗವಾಗಿ ಕಂದಾಯ ಸಚಿವರು ನಾಳೆ ಉಡುಪಿಯ ಆರೂರು ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಉಡುಪಿ ಶಾಸಕ ರಘುಪತಿ ಭಟ್ ,ಉಡುಪಿಗೆ ಆಗಮಿಸುವ ಸಚಿವರನ್ನು ಕೊಕ್ಕರ್ಣೆ ಬಸ್ ನಿಲ್ದಾಣದಿಂದ ಭವ್ಯ ಮೆರವಣಿಗೆ ಮೂಲಕ ಸ್ವಾಗತಿಸಲಾಗುವುದು.

ಬೆಳಿಗ್ಗೆ 11.30 ರಿಂದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಿ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಬಳಿಕ ಕಳ್ತೂರು ಗ್ರಾಮಕ್ಕೆ ಭೇಟಿ ನೀಡಿ, ನಂತರ ಸಂಜೆಯಿಂದ ಆರೂರು ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಈ ಸಂಬಂಧ ಎಲ್ಲ ಸಿದ್ಧತೆಗಳನ್ಬು ಮಾಡಲಾಗಿದ್ದು ಸಚಿವರನ್ನು ಭೇಟಿಯಾಗಬಯಸುವವರು ತಮ್ನ ಅಹವಾಲಿನ ಜೊತೆ ಆಗಮಿಸಬೇಕು ಎಂದು ಶಾಸಕರು ಹೇಳಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

18/02/2022 06:24 pm

Cinque Terre

4.48 K

Cinque Terre

0

ಸಂಬಂಧಿತ ಸುದ್ದಿ