ಬೈಂದೂರು: ಶಿವಮೊಗ್ಗದ ಹಿಂದೂ ಸಂಘಟನೆ ಕಾರ್ಯಕರ್ತ ಹರ್ಷ ನನ್ನು ಕೊಲೆಗೈದ ದುಷ್ಕರ್ಮಿಗಳನ್ನು ನೇಣಿಗೇರಿಸಬೇಕು ಎಂದು ಉಡುಪಿ ಜಿಲ್ಲೆ ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ ಒತ್ತಾಯಿಸಿದ್ದಾರೆ.
ಹರ್ಷ ಎಂಬ ಯುವಕ ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ್ದಾನೆ. ಆತನ ಕುಟುಂಬಕ್ಕೆ ನೋವು ಸಹಿಸುವ ಶಕ್ತಿಯನ್ನು ಕೊಲ್ಲೂರು ಮೂಕಾಂಬಿಕಾ ದೇವಿ ನೀಡಲಿ ಎಂದು ಶಾಸಕರು ಪ್ರಾರ್ಥಿಸಿದ್ದಾರೆ. ಕುಟುಂಬಕ್ಕೆ ಒಂದು ಲಕ್ಷ ರೂಪಾಯಿ ಪರಿಹಾರದ ಮೊತ್ತವನ್ನು ನೀಡಿದ್ದಾರೆ.
Kshetra Samachara
22/02/2022 08:51 pm