ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಪಾತ್ರೆ ಪಗಡೆ ಇಟ್ಟು ಆಸ್ಪತ್ರೆ ಮುಂದೆ ಪ್ರತಿಭಟಿಸಿದ ಸಿಬ್ವಂದಿ!

ಉಡುಪಿ: ಕಳೆದ ನಾಲ್ಕು ತಿಂಗಳಿನಿಂದ ವೇತನವಿಲ್ಲದೆ ಪರದಾಡುತ್ತಿರುವ ಇಲ್ಲಿನ ಬಿ.ಆರ್ ಶೆಟ್ಟಿ ತಾಯಿ ಮಕ್ಕಳ ಆಸ್ಪತ್ರೆ ಸಿಬ್ಬಂದಿಗಳು ಇವತ್ರು ಪಾತ್ರೆ ಪಗಡೆ ಇಟ್ಟು ಪ್ರತಿಭಟನೆ ನಡೆಸಿದರು.ಕಳೆದ ಮೂರು ದಿನಗಳಿಂದ ಆಸ್ಪತ್ರೆಯಲ್ಲಿ ಎಲ್ಲ ವಿಧದ ಚಿಕಿತ್ಸೆಯನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿದೆ.

ಸುಮಾರು 153 ಸಿಬ್ಬಂದಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.ಕಳೆದೆರಡು ದಿನಗಳಿಂದ ಸೇವೆಗೆ ಹಾಜರಾಗದೆ ಪ್ರತಿಭಟನೆ ನಡೆಸುತ್ತಿರುವ ಸಿಬ್ಬಂದಿ ಇವತ್ತು ಸರಕಾರದ ಗಮನ ಸೆಳೆಯಲು ವಿನೂತನ ರೀತಿಯ ಪ್ರತಿಭಟನೆ ನಡೆಸಿದರು.ಈ ಪ್ರತಿಭಟನೆಗೆ ಜಿಲ್ಲಾ ನಾಗರಿಕ ಸಮಿತಿ ಬೆಂಬಲ ವ್ಯಕ್ತಪಡಿಸಿದ್ದು ಆರೋಗ್ಯ ಕಾರ್ಯಕರ್ತರಿಗೆ ನ್ಯಾಯ ಸಿಗುವ ತನಕ ಹೋರಾಟ ಮಾಡುವ ಎಚ್ಚರಿಕೆ ನೀಡಿದೆ.

Edited By : Nagesh Gaonkar
Kshetra Samachara

Kshetra Samachara

23/02/2022 03:16 pm

Cinque Terre

11.42 K

Cinque Terre

1

ಸಂಬಂಧಿತ ಸುದ್ದಿ