ಉಡುಪಿ: ಶಿವಮೊಗ್ಗದಲ್ಲಿ ಗಲಭೆಗೆ ಪ್ರಚೋದನೆ ಮತ್ತು ಹಿಂಸಾಚಾರಕ್ಕೆ ನೇತೃತ್ವ ವಹಿಸಿದ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಜಿಲ್ಲಾ ಸಮಿತಿ ವತಿಯಿಂದ ಅಜ್ಜರಕಾಡು ಹುತಾತ್ಮರ ಸ್ಮಾರಕದ ಬಳಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಎಸ್‌ಡಿಪಿಐ ಉಡುಪಿ ಜಿಲ್ಲಾಧ್ಯಕ್ಷ ನಝೀರ್ ಅಂಬಾಗಿಲು, ಶಿವಮೊಗ್ಗ ಗಲಭೆಗೆ ಈಶ್ವರಪ್ಪನವರು ನೇರ ಹೊಣೆ.ಸಚಿವರಾಗಿ ಅವರು ಸೆಕ್ಷನ್ ಉಲ್ಲಂಘಿಸಿ ಯಾತ್ರೆಯಲ್ಲಿ ಭಾಗವಹಿಸಿ ಗಲಭೆಗೆ ಪ್ರಚೋದನೆ ನೀಡಿದ್ದಾರೆ. ಆದ್ದರಿಂದ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಎಸ್‌ಡಿಪಿಐ ಉಡುಪಿ ಜಿಲ್ಲಾ ಉಪಾಧ್ಯಕ್ಷ ಶಾಹಿದ್ ಅಲಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಖಲೀಲ್ ಅಹ್ಮದ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
24/02/2022 10:39 pm