ಮಂಗಳೂರು : ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷ ಕಲಾಪಕ್ಕೆ ಅಡ್ಡಿಪಡಿಸುವುದು ಹಾಗೂ ರಾಜ್ಯದಲ್ಲಿ ಅಶಾಂತಿ ಸೃಷ್ಟಿಗೆ ಕಾರಣವಾಗುತ್ತಿರುವುದನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಉತ್ತರ ಮಂಡಲದ ವತಿಯಿಂದ ಕಾವೂರಿನಲ್ಲಿ ಬಿಜೆಪಿ ಕಚೇರಿಯಿಂದ ಮೆರವಣಿಗೆ ಮೂಲಕ ಬೃಹತ್ ಪ್ರತಿಭಟನಾ ಸಭೆ ನಡೆಸಲಾಯಿತು.
ಈ ಸಂದರ್ಭ ಶಾಸಕ ಡಾ ಭರತ್ ಶೆಟ್ಟಿ ವೈ ಮಾತನಾಡಿ ಕಾಂಗ್ರೆಸ್ ಪಕ್ಷ ವಿಧಾನಸಭಾ ಕಲಾಪಕ್ಕೆ ಅಡ್ಡಿಪಡಿಸುವುದನ್ನು ತೀವ್ರವಾಗಿ ಖಂಡಿಸಿದರು. ನೂರಾರು ಅಭಿವೃದ್ಧಿ ಪರ ಕಾಯ್ದೆಗಳನ್ನು ಅನುಮೋದನೆಗಳನ್ನು ಪಡೆಯುವುದು, ರಾಜ್ಯದ ಅಭಿವೃದ್ಧಿಯ ನಿಟ್ಟಿನಲ್ಲಿ ಕೈಜೋಡಿಸುವ ಕೆಲಸ ಮಾಡಬೇಕಾದ ಕಾಂಗ್ರೆಸ್ ವಿಧಾನಸಭೆಯ ಒಳಗೆ ರಾಷ್ಟ್ರಧ್ವಜವನ್ನು ಹಿಡಿದುಕೊಂಡು ಕಾನೂನಿಗೆ ವಿರುದ್ಧವಾಗಿ ವರ್ತಿಸಿ ದೇಶದ್ರೋಹಿ ಕೆಲಸವನ್ನು ಮಾಡಿದೆ.
ಹಿಜಬ್ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ತನ್ನ ನಿರ್ಧಾರವನ್ನು ಧೈರ್ಯದಿಂದ ಪ್ರಕಟಿಸಲು ಮುಂದಾಗದೆ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಎಸ್ಡಿಪಿಐ ಪಕ್ಷದೊಂದಿಗೆ ಸೇರಿಕೊಂಡು ಶಿಕ್ಷಣಕ್ಕಾಗಿ ಬರುತ್ತಿದ್ದ ವಿದ್ಯಾರ್ಥಿನಿಯರ ಮನಸ್ಸಿನಲ್ಲಿ ಧರ್ಮದ ಆಫೀಮನ್ನು ತುಂಬಿ ಮಾನಸಿಕವಾಗಿ ಕ್ಷೋಭೆಯನ್ನು ತುಂಬಿದ್ದಾರೆ ಎಂದರು.
ಪ್ರತಿಭಟನೆಯಲ್ಲಿ ಉತ್ತರ ಮಂಡಲ ಭಾಜಪಾ ಅಧ್ಯಕ್ಷರಾದ ತಿಲಕರಾಜ್ ಕೃಷ್ಣಾಪುರ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಪೂಜಾ ಪೈ, ಉಪಾಧ್ಯಕ್ಷ ಗಣೇಶ್ ಹೊಸಬೆಟ್ಟು, ಮತ್ತಿತರರು ಉಪಸ್ಥಿತರಿದ್ದರು.
Kshetra Samachara
26/02/2022 02:37 pm