ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ವಿಧಾನಸಭೆ ಕಲಾಪಕ್ಕೆ ಅಡ್ಡಿಪಡಿಸಿದ ಕಾಂಗ್ರೆಸ್ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ!

ಮಣಿಪಾಲ: ಶಿವಮೊಗ್ಗದಲ್ಲಿ ನಡೆದ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣವನ್ನು ಖಂಡಿಸಿ ಹಾಗೂ ವಿಧಾನಸಭೆ ಅಧಿವೇಶನಕ್ಕೆ ಅಡ್ಡಿ ಉಂಟು ಮಾಡಿರುವ ಕಾಂಗ್ರೆಸ್ ವಿರುದ್ಧ ಉಡುಪಿಯಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.

ಮಣಿಪಾಲದ ಟೈಗರ್ ಸರ್ಕಲ್ ಬಳಿ ಪ್ರತಿಭಟನೆ ಸಭೆಯನ್ನು ಆಯೋಜಿಸಲಾಗಿತ್ತು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಡಿಕೆಶಿ ಮತ್ತು ಸಿದ್ದರಾಮಯ್ಯ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಈಶ್ವರಪ್ಪನವರು ಮುಂದೊಂದು ದಿನ ಕೇಸರಿ ಧ್ವಜ ನಮ್ಮ ರಾಷ್ಟ್ರಧ್ವಜ ಆಗಬಹುದು ಎಂದಿದ್ದಾರೆ. ಇಂದು ನಾಳೆ ಆಗುತ್ತದೆ ಎಂದು ಅವರೇನು ಹೇಳಿಲ್ಲ. ಈ ಮಾತನ್ನು ನಾನು ಕೂಡ ಸಮರ್ಥನೆ ಮಾಡಿಕೊಳ್ಳುತ್ತಿದ್ದು ಮುಂದೊಂದು ದಿನ ಆದರೂ ಆಗಬಹುದು. ಈ ವಿಚಾರವನ್ನು ಇಟ್ಟುಕೊಂಡು ಕಾಂಗ್ರೆಸ್ ವಿಧಾನಸಭೆ ಅಧಿವೇಶನಕ್ಕೆ ವಿನಾಕಾರಣ ಅಡ್ಡಿ ಉಂಟು ಮಾಡುತ್ತಿದ್ದು, ಹಿಜಾಬ್ ವಿಚಾರವನ್ನು ಮರೆಮಾಚಲು ಕಾಂಗ್ರೆಸ್ ಈ ರೀತಿಯಾಗಿ ವರ್ತಿಸುತ್ತಿದೆ ಎಂದು ಆರೋಪಿಸಿದರು.

Edited By : Nagesh Gaonkar
Kshetra Samachara

Kshetra Samachara

26/02/2022 02:48 pm

Cinque Terre

8.58 K

Cinque Terre

1

ಸಂಬಂಧಿತ ಸುದ್ದಿ