ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ನಗರಸಭೆ ಸಾಮಾನ್ಯ ಸಭೆ; "ಕುಡಿಯುವ ನೀರಿನ ಸಮಸ್ಯೆಗೆ ಶೀಘ್ರ ಮುಕ್ತಿ"

ಉಡುಪಿ: ಉಡುಪಿ ನಗರಸಭೆಯ ಸಾಮಾನ್ಯ ಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್ ಅಧ್ಯಕ್ಷತೆಯಲ್ಲಿ ಜರುಗಿತು. ಕುಡಿಯುವ ನೀರು, ಒಳಚರಂಡಿ ಸಮಸ್ಯೆ ಸಹಿತ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯಿತು.

ನಗರದಲ್ಲಿ ಈಗಾಗಲೇ ಅಲ್ಲಲ್ಲಿ ನೀರಿನ ಸಮಸ್ಯೆ ತಲೆದೋರುತ್ತಿವೆ. ಎತ್ತರದ ಭಾಗಕ್ಕೆ ನೀರು ಲಭ್ಯವಾಗುತ್ತಿಲ್ಲ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯೆ ಅಮೃತಾ ಕೃಷ್ಣಮೂರ್ತಿ ಮಾತನಾಡಿ, ನೀರು ಸರಿಯಾಗಿ ಪಂಪಿಂಗ್ ಆಗುತ್ತಿದೆಯಾ ಅಥವಾ ನೀರು ಡ್ಯಾಮ್ ನಲ್ಲಿ ಲಭ್ಯ ಇದೆಯಾ ಎಂಬ ಬಗ್ಗೆ ಅಧಿಕಾರಿಗಳು ಉತ್ತರ ನೀಡಬೇಕೆಂದು ಆಗ್ರಹಿಸಿದರು.

ಇದಕ್ಕೆ ಅಧಿಕಾರಿಗಳು ಉತ್ತರಿಸಿ, ಮೇ 15ರ ತನಕ ಬಜೆ ಡ್ಯಾಂ ನಲ್ಲಿ ನೀರಿನ ಲಭ್ಯತೆ ಇದೆ. ಪ್ರತಿದಿನ ಪಂಪಿಂಗ್ ನಡೆಯುತ್ತಿದ್ದು, ನೀರಿನ ಬೇಡಿಕೆ ಹೆಚ್ಚಾಗುತ್ತಿರುವುದರಿಂದ ಈ ಸಮಸ್ಯೆ ಉದ್ಭವವಾಗುತ್ತದೆ ಎಂದರು.

ಸಭೆಯಲ್ಲಿ ಭಾಗವಹಿಸಿದ್ದ ಶಾಸಕ ರಘುಪತಿ ಭಟ್ ಮಾತನಾಡಿ, 30 ಎಂಎಲ್ ಡಿ ನೀರು ಸರಬರಾಜಿಗಾಗಿ ಮತ್ತೊಂದು ಪೈಪ್ ಅಳವಡಿಸಿ ನೀರು ಸರಬರಾಜಿಗೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಆದಷ್ಟು ಬೇಗ ಟೆಂಡರ್ ಮುಗಿದರೆ ಈ ಎಲ್ಲ ಸಮಸ್ಯೆಗೆ ಮುಕ್ತಿ ಸಿಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ನಗರಲ್ಲಿರುವ ಅಕ್ರಮ ಕಟ್ಟಡಗಳ ತೆರವಿಗೆ ಹಾಗೂ ಇವುಗಳ ಬಗ್ಗೆ ಮಾಹಿತಿ ನೀಡುವಂತೆ ಸದಸ್ಯರು ಒತ್ತಾಯಿಸಿದರು. ಒಟ್ಟು 18 ಅಕ್ರಮ ಕಟ್ಟಡ ತೆರವುಗೊಳಿಸಲು ಆದೇಶವಿದೆ. ಕೆಲವರು ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ.

ಆದರೆ, ನಗರ ಭಾಗದಲ್ಲಿರುವ ಅಕ್ರಮ ಕಟ್ಟಡಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ಪೌರಾಯುಕ್ತ ಉದಯ್ ಶೆಟ್ಟಿ ತಿಳಿಸಿದರು.

ಗುಜರಿ ಅಂಗಡಿಯನ್ನು ಹೋಟೆಲ್ ಮಾಡಲಾಗಿದ್ದು ನಿಯಮ ಪಾಲಿಸದ ಹೋಟೆಲ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನಿರ್ಣಯ ಕೈಗೊಳ್ಳಲಾಯಿತು.

Edited By : Nagesh Gaonkar
Kshetra Samachara

Kshetra Samachara

28/02/2022 04:09 pm

Cinque Terre

13.65 K

Cinque Terre

1

ಸಂಬಂಧಿತ ಸುದ್ದಿ