ಬೆಳ್ತಂಗಡಿ: ಕೆಂಪುಕೋಟೆಯ ಮೇಲೆ ಭಗವಾಧ್ವಜ ಹಾರಿಸಿಯೇ ಸಿದ್ಧ ಎಂದು ತುಳು ಭಾಷೆಯಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜ ಮಾಡಿರುವ ಭಾಷಣದ ವೀಡಿಯೊ ತುಣುಕು ವೈರಲ್ ಆಗಿದೆ.
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜ ಹೀಗೆ ಮಾತನಾಡಿದ್ದು, ಕಾಂಗ್ರೆಸ್ ಕುಮ್ಮಕ್ಕಿನಿಂದ ಹಿಂದೂ ಕಾರ್ಯಕರ್ತ ಹರ್ಷನ ಹತ್ಯೆ ಆಗಿದೆ. ಕೆಂಪುಕೋಟೆ ಮೇಲೆ ಭಗವಾಧ್ವಜ ಹಾರಿಸಿಯೇ ಹಾರಿಸ್ತೀವಿ ಎಂದು ಗುಡುಗಿದ್ದಾರೆ.
ಕೆ.ಎಸ್. ಈಶ್ವರಪ್ಪ ಈ ಹೇಳಿಕೆ ನೀಡಿದ್ರೂ ಅಂತ ಅಧಿವೇಶನ ಮೊಟಕುಗೊಳಿಸಿದ್ರು. ಆದರೆ, ಕೆಂಪುಕೋಟೆಯ ಮೇಲೆ ಭಗವಾಧ್ವಜ ಹಾರಿಸೋದು ದಿಟ. ಆದರೆ, ರಾಷ್ಟ್ರಧ್ವಜದ ಕೆಳಗೆ ಭಗವಾಧ್ವಜ ಹಾರಿಸುತ್ತೇವೆ ಎಂದರು.
ಶಿವಮೊಗ್ಗದಲ್ಲಿ ಹರ್ಷನ ಹತ್ಯೆ ಖಂಡಿಸಿ ಸೋಮವಾರ ಬೆಳ್ತಂಗಡಿಯ ಬಸ್ ನಿಲ್ದಾಣದಲ್ಲಿ ನಡೆದ ಹಿಂದೂ ಜನಜಾಗೃತಿ ಸಮಿತಿ ನಡೆಸಿದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
PublicNext
01/03/2022 07:50 pm