ಉಡುಪಿ: ಕೊಲೆಯಾದ ಹರ್ಷನ ಕುಟುಂಬಕ್ಕೆ ಬಿಜೆಪಿ ಟಿಕೆಟ್ ನೀಡಿದರೆ ಕಾಂಗ್ರೆಸ್ ಅಭ್ಯರ್ಥಿ ಹಾಕುವುದಿಲ್ಲ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಸಚಿವ ಕೋಟ ತೀವ್ರ ಅಕ್ರೋಶ ವ್ಯಕ್ತಪಡಿಸಿದ್ದಾರೆ.ಉಡುಪಿಯಲ್ಲಿ ಮಾತನಾಡಿದ ಅವರು ,ಯಾರಿಗೆ ಟಿಕೆಟ್ ನೀಡಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ.ಕಾಂಗ್ರೆಸ್ ನವರು ಹೇಳಿಕೆ ಕೊಡುವ ಅವಶ್ಯಕತೆ ಇಲ್ಲ.ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಕೊಲೆಯಾದ ಹಿಂದೂ ಕಾರ್ಯಕರ್ತನಿಗೆ ರಾಜ್ಯ ಸರಕಾರ ಸಂಪೂರ್ಣ ರೀತಿಯಲ್ಲಿ ಸಹಾಯ ಮಾಡಿ ಕುಟುಂಬದ ಸಮಸ್ಯೆ ಬಗೆಹರಿಸುವ ಕೆಲಸ ಮಾಡಿದೆ ಎಂದರು.
ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಸಾಕಷ್ಟು ಹಿಂದೂ ಕಾರ್ಯಕರ್ತರ ಕೊಲೆಗಳಾಗಿವೆ.ಆಗ ಕಾಂಗ್ರೆಸ್ ನವರು ಯಾಕೆ ಟಿಕೆಟ್ ಕೊಡಬೇಕು ಎಂದು ಹೇಳಿಲ್ಲ? ಅವರ ಅವಧಿಯಲ್ಲೇ ಕೊಲೆಗಾರರಿಗೆ ಬೆಂಬಲ ನೀಡಿದ್ದರಿಂದ ಇವತ್ತು ಈ ಪರಿಸ್ಥಿತಿ ಬಂದಿದೆ ಎಂದು ಕಿಡಿಕಾರಿದ್ದಾರೆ
PublicNext
02/03/2022 11:41 am