ಉಡುಪಿ: ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆಯು ಕೇವಲ ರಾಜಕೀಯ ಪಾದಯಾತ್ರೆ ಆಗಿದೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಟೀಕಿಸಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, '2013ರಲ್ಲಿ ಕಾಂಗ್ರೆಸ್ ನಮ್ಮ ನಡಿಗೆ ಕೃಷ್ಣೆಯೆಡೆಗೆ ಎಂಬ ಪಾದಯಾತ್ರೆಯನ್ನು ಕೈಗೊಂಡಿತ್ತು. ನಾವು ಅಧಿಕಾರಕ್ಕೆ ಬಂದರೆ ಕೃಷ್ಣಾ ಮೇಲ್ದಂಡೆ ಯೋಜನೆಗಾಗಿ ಪ್ರತಿ ವರ್ಷ ಬಜೆಟ್‌ನಲ್ಲಿ 10 ಸಾವಿರ ಕೋಟಿ ರೂ. ಮೀಸಲಿಡುತ್ತೇವೆ ಎಂದಿತ್ತು. ಆದರೆ ಅಧಿಕಾರಕ್ಕೆ ಬಂದ ಮೇಲೆ ಯೋಜನೆಯನ್ನು ಪೂರ್ಣ ಮಾಡಲೇ ಇಲ್ಲ. ಮೇಕೆದಾಟು ಪಾದಯಾತ್ರೆಯ ಮೊದಲ ಹಂತದಲ್ಲಿ ಕಾಂಗ್ರೆಸ್ ಕೊರೊನಾ ಹಬ್ಬಿಸುವಲ್ಲಿ ಯಶಸ್ವಿಯಾಗಿದೆ. ಎರಡನೇ ಹಂತದಲ್ಲಿ ಇದೀಗ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆಗೆ ಪಾದಯಾತ್ರೆ ಕಾರಣವಾಗಿದೆ. ಮೇಕೆದಾಟು ವಿಚಾರ ಸುಪ್ರೀಂ ಕೋರ್ಟ್‌ನಲ್ಲಿದೆ. ಕಾಂಗ್ರೆಸ್ ಸದನಕ್ಕೆ ಬಂದು ಈ ಯೋಜನೆಯ ಕುರಿತಾಗಿ ಚರ್ಚೆ ನಡೆಸಲಿ. ಸದನವನ್ನು ಬಹಿಷ್ಕರಿಸಿ ಕಾಂಗ್ರೆಸ್ ಏನನ್ನೂ ಸಾಧಿಸಲ್ಲ' ಎಂದು ಹೇಳಿದ್ದಾರೆ.
PublicNext
03/03/2022 07:38 am