ಮಂಗಳೂರು: ಕ್ರೈಸ್ತರ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿ ನಗರದ ಕೆಥೋಲಿಕ್ ಸಭೆಯ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸ್ಥಳೀಯ ಶಾಖೆಗಳೊಂದಿಗೆ ಒಟ್ಟಾಗಿ ನಿನ್ನೆ ಸಂಜೆ ಮೇಣದಬತ್ತಿಯ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲಾಯಿತು.
ಪ್ರಾರ್ಥನಾ ಮಂದಿರಗಳನ್ನು ಕೆಡವಬಾರದೆಂದು ಹೊಸ ಕಾನೂನನ್ನು ಸರಕಾರ ಜಾರಿಗೆ ತಂದಿದ್ರೂ ಪಟ್ಟಭದ್ರ ಹಿತಾಸಕ್ತಿಗಳು ಕಾನೂನಿನ ವಿರುದ್ಧವಾಗಿ ಕಾರ್ಯಾಚರಣೆ ಮಾಡುತ್ತಿದ್ದಾರೆ. ಇದಲ್ಲದೇ ಅಲ್ಲಲ್ಲಿ ಮತಾಂತರ ಆಗಿದೆ ಎಂದು ಶಂಕೆ ವ್ಯಕ್ತಪಡಿಸಿ ಹಲವು ದೌರ್ಜನ್ಯಗಳು ನಡೆಯುತ್ತಿವೆ. ಸುಳ್ಳು ಸಾಕ್ಷ್ಯಗಳನ್ನು ಸೃಷ್ಟಿಸುವ ಉದ್ದೇಶದಿಂದ ಅಲ್ಲಲ್ಲಿ ಸುಳ್ಳು ಪಿರ್ಯಾದಿಗಳನ್ನು ಪೊಲೀಸ್ ಮತ್ತು ಇತರ ಇಲಾಖೆಗಳಿಗೆ ನೀಡಿ ಕ್ರೈಸ್ತ ಸಮುದಾಯದವರನ್ನು ಹಾಗೂ ಕ್ರೈಸ್ತ ಸಂಸ್ಥೆಗಳನ್ನು ದೌರ್ಜನ್ಯಕೊಳಪಡಿಸುತ್ತಿದ್ದಾರೆ ಇದನ್ನು ನಾವು ಖಂಡಿಸುತ್ತೇವೆ” ಎಂದು ಆಯೋಜಕರು ಶಾಂತಿಯುತ ಪ್ರತಿಭಟನೆಯ ಮೂಲಕ ಸರಕಾರದ ಗಮನ ಸೆಳೆಯಲು ಪ್ರಯತ್ನಿಸಿದರು.
Kshetra Samachara
03/03/2022 10:49 am