ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಯುವ ಮೋರ್ಚಾ ಪದಾಧಿಕಾರಿಗಳ ವಿಶೇಷ ಸಭೆಯಲ್ಲಿ ಸಚಿವ ಕೋಟ ಭಾಗಿ, ಅಹವಾಲು ಸ್ವೀಕಾರ

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನಡೆದ ಜಿಲ್ಲಾ ಯುವ ಮೋರ್ಚಾ ಪದಾಧಿಕಾರಿಗಳ ವಿಶೇಷ ಸಭೆಯಲ್ಲಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭಾಗವಹಿಸಿದರು.

ಸದೃಢ ಪಕ್ಷ ಸಂಘಟನೆ ಮತ್ತು ಮುಂಬರಲಿರುವ ಚುನಾವಣಾ ದೃಷ್ಠಿಯಿಂದ ಯುವ ಮೋರ್ಚಾ ಪದಾಧಿಕಾರಿಗಳು, ಸಮಿತಿ ಸದಸ್ಯರು ಹಾಗೂ ಯುವ ಕಾರ್ಯಕರ್ತರು ಬದ್ಧತೆಯಿಂದ ಪರಿಣಾಮಕಾರಿಯಾಗಿ ತೊಡಗಿಸಿಕೊಳ್ಳುವ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಿ ವಿಚಾರ ವಿನಿಮಯ ನಡೆಸಿದರು. ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.ಬಳಿಕ ಸಚಿವರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

Edited By : Nagaraj Tulugeri
Kshetra Samachara

Kshetra Samachara

03/03/2022 12:29 pm

Cinque Terre

9.41 K

Cinque Terre

1

ಸಂಬಂಧಿತ ಸುದ್ದಿ