ಮುಲ್ಕಿ: ಕರ್ನಾಟಕ ಸರ್ಕಾರ ಕಂದಾಯ ಇಲಾಖೆ ವತಿಯಿಂದ ಮುಲ್ಕಿ ತಾಲೂಕಿನ ಅರ್ಹ ಅನುಭವಿಗಳಿಗೆ ಸುಮಾರು 88 ಹಕ್ಕು ಪತ್ರ ವಿತರಣಾ ಕಾರ್ಯಕ್ರಮ, ಕೊವಿಡ್ ನಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಸ್ಥರಿಗೆ ಕೊವಿಡ್ ಪರಿಹಾರಧನ, ಸಂಧ್ಯಾ ಸುರಕ್ಷಾ ಯೋಜನೆ ಪತ್ರ ವಿತರಣಾ ಕಾರ್ಯಕ್ರಮ ನಡೆಯಿತು.
ಶಾಸಕ ಉಮಾನಾಥ ಕೋಟ್ಯಾನ್ ಹಕ್ಕು ಪತ್ರ ವಿತರಿಸಿ ಮಾತನಾಡಿ ಅಭಿವೃದ್ಧಿಯಲ್ಲಿ ಯಾವುದೇ ರಾಜಕೀಯ ಇಲ್ಲ ಜನರ ಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡಿದ್ದೇನೆ ಕಳೆದ ನಾಲ್ಕು ವರ್ಷಗಳಲ್ಲಿ ಮುಲ್ಕಿ-ಮೂಡಬಿದ್ರೆ ಕ್ಷೇತ್ರದಲ್ಲಿ ಸುಮಾರು 9 ಸಾವಿರ ಹಕ್ಕುಪತ್ರ ವಿತರಣೆ ಯಾಗಿದ್ದು ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ಮತ್ತಷ್ಟು ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನ.ಪಂ ಅಧ್ಯಕ್ಷ ಸುಭಾಷ್ ಶೆಟ್ಟಿ ವಹಿಸಿದ್ದರು
ಈ ಸಂದರ್ಭ ಮುಲ್ಕಿ ತಹಶಿಲ್ದಾರ್ ಗುರುಪ್ರಸಾದ್, ನ ಪಂ ಮುಖ್ಯಾಧಿಕಾರಿ ಚಂದ್ರ ಪೂಜಾರಿ, ಉಪತಹಶಿಲ್ದಾರ್ ಕಮಲಮ್ಮ,ಕಂದಾಯ ನಿರೀಕ್ಷಕ ದಿನೇಶ್, ವಿಎ ಮೋಹನ್, ಕಂದಾಯ ಅಧಿಕಾರಿ ಅಶೋಕ್, ತಾಲೂಕು ವ್ಯಾಪ್ತಿಯ ವಿವಿಧ ಪಂಚಾಯತ್ ಅಧ್ಯಕ್ಷರು, ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು. ಸ್ಥಾಯಿ ಸಮಿತಿ ಅಧ್ಯಕ್ಷ ಶೈಲೇಶ್ ನಿರೂಪಿಸಿದರು
Kshetra Samachara
05/03/2022 10:40 pm