ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು: ಅಂಬೇಡ್ಕರ್‌ಗೆ ಅವಮಾನ- ನ್ಯಾಯಾಧೀಶರ ವಜಾಕ್ಕೆ ಒತ್ತಾಯಿಸಿ ಪ್ರತಿಭಟನೆ

ಪುತ್ತೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌ಗೆ ಅವಮಾನ ಮಾಡಿದ ರಾಯಚೂರು ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡು ಬದಲು ಸೇವೆಯಿಂದಲೇ ವಜಾ ಮಾಡಬೇಕೆಂದು ಆಗ್ರಹಿಸಿ ದಲಿತ ಸೇವಾ ಸಮಿತಿಯಿಂದ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ದಲಿತ ಸೇವಾ ಸಮಿತಿಯ ಸ್ಥಾಪಕಾಧ್ಯಕ್ಷ ಸೇಸಪ್ಪ ಬೆದ್ರಕಾಡು, ಅಂಬೇಡ್ಕರ್ ಅವರನ್ನು ಅವಮಾನಿಸಿದ ನ್ಯಾಯಾಧೀಶರ ವಿರುದ್ಧ ದೇಶದ್ರೋಹದ ಪ್ರಕರಣವನ್ನು ದಾಖಲಿಸಬೇಕು. ನ್ಯಾಯಾಧೀಶ ಸ್ಥಾನದಲ್ಲಿ ಇರಲು ಆ ವ್ಯಕ್ತಿ ಅನರ್ಹರಾಗಿದ್ದು, ಸರಕಾರ ತಕ್ಷಣವೇ ಅವರನ್ನು ಸೇವೆಯಿಂದಲೇ ವಜಾ‌ ಮಾಡಬೇಕೆಂದು ಒತ್ತಾಯಿಸಿದರು.

ಶಿವಮೊಗ್ಗದಲ್ಲಿ ಕೊಲೆಯಾದ ಹಿಂದೂ‌ ಕಾರ್ಯಕರ್ತ ಹರ್ಷನ ಕುಟುಂಬಕ್ಕೆ ಸರಕಾರ ಪರಿಹಾರ ನೀಡಿದೆ. ಆದರೆ ಬೆಳ್ತಂಗಡಿಯಲ್ಲಿ ಕೊಲೆಗೀಡಾದ ದಲಿತ ಯುವಕ ದಿನೇಶ್ ಕುಟುಂಬಕ್ಕೆ ಯಾವುದೇ ಪರಿಹಾರವನ್ನು ನೀಡಿಲ್ಲ ಎಂದರು.

Edited By :
Kshetra Samachara

Kshetra Samachara

07/03/2022 01:52 pm

Cinque Terre

7.56 K

Cinque Terre

0

ಸಂಬಂಧಿತ ಸುದ್ದಿ