ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡಬಿದ್ರೆ: ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವ ವಿದ್ಯಾರ್ಥಿನಿ ಮನೆಗೆ ಶಾಸಕ ಭೇಟಿ

ಮೂಡಬಿದ್ರೆ: ಮೂಡಬಿದ್ರೆ ಸಮೀಪದ ಮೂಡುಮಾರ್ನಾಡು ನಿವಾಸಿ ವೈದ್ಯಕೀಯ ವಿದ್ಯಾಭ್ಯಾಸ ವಿದ್ಯಾರ್ಥಿನಿ ಉಕ್ರೇನ್ ನಲ್ಲಿ ಸಿಲುಕಿಕೊಂಡಿದ್ದು. ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ಸೂಚನೆಯಂತೆ ವಿದ್ಯಾರ್ಥಿನಿಯ ಮನೆಗೆ ತೆರಳಿ ಧೈರ್ಯ ತುಂಬುವ ಕೆಲಸವನ್ನು ಶಾಸಕರಾದ ಉಮಾನಾಥ್ ಕೋಟ್ಯಾನ್ ಅವರು ಮಾಡಿದರು.

ವಿದ್ಯಾರ್ಥಿನಿಯು ಸುರಕ್ಷಿತವಾಗಿದ್ದು ಸೋಮವಾರ ರಾತ್ರಿ ವಿಮಾನವನ್ನು ಹತ್ತಲಿದ್ದಾರೆ. ನಾಳೆ ಅಥವಾ ನಾಡಿದ್ದು ಸ್ವದೇಶಕ್ಕೆ ಮರಳಲಿದ್ದಾರೆ ಎಂದು ಶಾಸಕರು ಭರವಸೆ ನೀಡಿದರು.

ಮುಲ್ಕಿ-ಮೂಡಬಿದ್ರೆ ಕ್ಷೇತ್ರದ ಬಿಜೆಪಿ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

08/03/2022 08:07 am

Cinque Terre

6.21 K

Cinque Terre

0

ಸಂಬಂಧಿತ ಸುದ್ದಿ