ವಿಟ್ಲ: ಪಟ್ಟಣ ಪಂಚಾಯಿತಿ ನಗರೋತ್ಥಾನ ಯೋಜನೆಯ ಕ್ರಿಯಾ ಯೋಜನೆಯಲ್ಲಿ ತಾರತಮ್ಯ ಮಾಡಲಾಗಿದೆ. ೫ ಕೋಟಿ ರೂ. ಅನುದಾನ ಮಂಜೂರಾತಿಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರ ವ್ಯಾಪ್ತಿಯಲ್ಲಿ ಕಾಮಗಾರಿಗಳನ್ನು ಮಂಜೂರು ಮಾಡದೇ ಅನ್ಯಾಯವೆಸಗಿದ್ದಾರೆ ಎಂದು ವಿಟ್ಲ - ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವಕ್ತಾರ ರಮಾನಾಥ ವಿಟ್ಲ ಆರೋಪಿಸಿದ್ದಾರೆ... ವಿಟ್ಲ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪುತ್ತೂರು ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ ಅವರು ನಗರೋತ್ಥಾನ ಯೋಜನೆಯಡಿಯಲ್ಲಿ ೫ ಕೋಟಿ ರೂ. ಅನುದಾನ ಮಂಜೂರು ಮಾಡಿದ್ದಾಗ ಎಲ್ಲಾ ಪಕ್ಷವರಿಗೂ ಸಮನಾಗಿ ಅನುದಾನ ಹಂಚಿಕೆ ಮಾಡುವ ಮೂಲಕ ಅಭಿವೃದ್ಧಿಗೆ ಶ್ರಮಿಸಿದ್ದರು. ಆದರೆ ಈ ಬಾರಿ ಏಕಪಕ್ಷೀಯವಾದ ನಿರ್ಧಾರವನ್ನು ಮಾಡಲಾಗಿದೆ ಅಂದ್ರು.
ಕಳೆದ ಶಾಸಕರ ಅವಧಿಯಲ್ಲಿ ನಗರೋತ್ಥಾನ ಯೋಜನೆಯಡಿಯಲ್ಲಿ ಪಂಚಾಯಿತಿ ಕಾರ್ಯಾಲಯಕ್ಕೆ ೫೦ ಲಕ್ಷ ರೂ.ಗಳನ್ನು ಕಾದಿರಿಸಲಾಗಿತ್ತಾದರೂ, ಪಂಚಾಯಿತಿ ಆಡಳಿತ ಅದನ್ನು ಬೇರೆ ಯೋಜನೆಗಳಿಗೆ ಬಳಸಿದೆ. ಈ ಬಾರಿ ಅದಕ್ಕೆ ಬದಲಾಗಿ ವಾಣಿಜ್ಯ ಸಂಕೀರ್ಣಕ್ಕೆ ೫೦ ಲಕ್ಷ ರೂ. ಅನುದಾನ ಕಾದಿರಿಸಿದ್ದಾರೆ. ಹಾಗಾದರೆ ಸುಸಜ್ಜಿತ ಕಾರ್ಯಾಲಯ ವಿಟ್ಲ ಪಟ್ಟಣ ಪಂಚಾಯತ್‌ಗೆ ಅವಶ್ಯವಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಇನ್ನು ಈ ಸಂದರ್ಭದಲ್ಲಿ ವಿಟ್ಲ ಪ.ಪಂ.ಸದಸ್ಯರಾದ ಅಬ್ದುಲ್ ರಹಿಮಾನ್ ನೆಲ್ಲಿಗುಡ್ಡೆ, ವಿ.ಕೆ.ಎಂ.ಅಶ್ರಫ್, ಡೀಕಯ್ಯ, ಕಾಂಗ್ರೆಸ್ ಪಕ್ಷದ ಎನ್.ಎಸ್.ಡಿ.ಅಶೋಕ್ ಉಪಸ್ಥಿತರಿದ್ರು.
Kshetra Samachara
09/03/2022 06:45 pm