ಬೆಂಗಳೂರು: ಮುಲ್ಕಿ-ಮೂಡಬಿದ್ರೆ ಕ್ಷೇತ್ರದ ಮುಲ್ಕಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವಂತೆ ಶಾಸಕ ಉಮಾನಾಥ ಕೋಟ್ಯಾನ್ ವಿಧಾನಸಭೆಯ ಅಧಿವೇಶನದಲ್ಲಿ ಮನವಿ ಮಾಡಿದ್ದಾರೆ.
ಅಧಿವೇಶನದಲ್ಲಿ ಅವರು ಮಾತನಾಡಿ, ಕ್ಷೇತ್ರದ ಮೂಲ್ಕಿ ತಾಲೂಕಿನಲ್ಲಿ ಕುಡಿಯುವ ನೀರಿನ ಅಭಾವವಿದ್ದು, ಕರಾವಳಿ ಸಮುದ್ರತೀರದ ಪ್ರದೇಶವಾದ್ದರಿಂದ ಉಪ್ಪು ನೀರಿನ ಸಮಸ್ಯೆ ಕಾಡುತ್ತಿದೆ. ಇದರಿಂದಾಗಿ ನಾಗರಿಕರಿಗೆ ನೀರಿನ ಅಭಾವ ಉಂಟಾಗಿದೆ. ಇದನ್ನ ಬಗೆಹರಿಸಬೇಕು ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ರವರಲ್ಲಿ ಮನವಿ ಮಾಡಿದ್ದಾರೆ.
Kshetra Samachara
10/03/2022 07:42 am