ಮಂಗಳೂರು: ಯುಪಿಯಲ್ಲಿ ಯೋಗಿ ಆದಿತ್ಯನಾಥ್ ಗೂಂಡಾ ರಾಜ್ಯವನ್ನು ಜನಸಾಮಾನ್ಯರ ರಾಜ್ಯವಾಗಿ ಪರಿವರ್ತನೆ ಮಾಡಿದ್ದಾರೆ. ಈ ಚುನಾವಣಾ ಫಲಿತಾಂಶವು ಕರ್ನಾಟಕ ರಾಜ್ಯ ಚುನಾವಣೆಯ ಮೇಲೂ ಪರಿಣಾಮ ಬೀರಲಿದೆ ಎಂದು ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಹೇಳಿದರು. ಪಂಚರಾಜ್ಯ ಚುನಾವಣೆ ಫಲಿತಾಂಶದ ಬಗ್ಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮೂವರು ಸಿಎಂ ಬದಲಾವಣೆಯಾದರೂ ಬಿಜೆಪಿ ಕರ್ನಾಟಕದಲ್ಲಿ ಅತೀ ದೊಡ್ಡ ಪಕ್ಷವಾಗಿದೆ. ಬಿಜೆಪಿಗೆ ಬೇರೆ ಬೇರೆ ಪಕ್ಷಗಳಿಂದಲೂ ಜನರು ಬರುತ್ತಿದ್ದಾರೆ. ಉತ್ತರಾಖಂಡದಲ್ಲಿ ಮೂವರು ಮುಖ್ಯಮಂತ್ರಿಗಳ ಬಗ್ಗೆ ಅಪಪ್ರಚಾರ ಮಾಡಿದ್ರು.. ಆದರೆ ಈಗ ಉತ್ತರಾಖಂಡ ಫಲಿತಾಂಶ ಏನಾಗಿದೆ ಎಂದು ಪ್ರಶ್ನಿಸಿದರು. ಹಾಗೇ ನಿರೀಕ್ಷೆಯಂತೇ ಫಲಿತಾಂಶ ಬರುತ್ತಿದೆ. ಕಾಂಗ್ರೆಸ್ ಈ ಹಿಂದೆಯೇ ಧೂಳಿಪಟವಾಗಿದೆ. ನರೇಂದ್ರ ಮೋದಿ ಆಡಳಿತ ವರ್ಚಸ್ಸಿನ ಎದುರು ಬೇರೆ ಯಾವ ಪಾರ್ಟಿಯೂ ಉಳಿಯಲು ಸಾಧ್ಯವಿಲ್ಲ. ಕಾಂಗ್ರೆಸ್ ಇಷ್ಟು ದಿನ ದೇಶ ಕೊಳ್ಳೆ ಹೊಡೆದಿತ್ತು. ಒಂದೇ ಕುಟುಂಬದವರು ರಾಜಕೀಯ ಮಾಡಿದ್ದಾರೆ. ಇದೇ ಅವರ ಅಧ್ಯಾಯ ಮುಗಿಯಲು ಕಾರಣವಾಗಿದೆ ಎಂದು ಡಿವಿ ಸದಾನಂದ ಗೌಡ ಹೇಳಿದ್ದಾರೆ.
Kshetra Samachara
10/03/2022 01:59 pm