ಕಾರ್ಕಳ: ಪಂಚರಾಜ್ಯ ಚುನಾವಣೆ ಫಲಿತಾಂಶ ಅಭಿವೃದ್ಧಿ , ಹಿಂದುತ್ವ, ದಕ್ಷ ಆಡಳಿತಕ್ಕೆ ಸಿಕ್ಕ ಜಯವಾಗಿದೆ ಎಂದು ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ಸುನಿಲ್‌ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಕಾರ್ಕಳದಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ಎಲ್ಲ ರಾಜ್ಯಗಳಲ್ಲೂ ಧೂಳಿಪಟವಾಗಿದೆ. ಉತ್ತರ ಪ್ರದೇಶದಂತಹ ದೊಡ್ಡ ರಾಜ್ಯದಲ್ಲಿ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಂಡಿದೆ. ಕೇವಲ ಎರಡು ಅಂಕೆಯನ್ನು ದಾಟಲೂ ಕಾಂಗ್ರೆಸ್ಸಿಗೆ ಸಾಧ್ಯವಾಗಿಲ್ಲ. ಕಾಂಗ್ರೆಸ್ ಇನ್ನು ಮುಂದೆ ಭೂತಕಾಲದ ಪಾರ್ಟಿ.
ವರ್ತಮಾನದಲ್ಲಿ ಇಲ್ಲ. ಭವಿಷ್ಯದಲ್ಲೂ ಕಾಂಗ್ರೆಸ್ ಇರಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ನಮ್ಮೆಲ್ಲ ಕಾರ್ಯಕರ್ತರಿಗೆ ಈ ಫಲಿತಾಂಶ ಉತ್ಸಾಹ ಕೊಟ್ಟಿದೆ ಎಂದ ಅವರು, ಇದೇ ಉತ್ಸಾಹದಲ್ಲಿ ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ರಚನೆಯಾಗಲಿದೆ. ಇದಕ್ಕೆ ಬೇಕಾದ ಎಲ್ಲ ತಂತ್ರಗಾರಿಕೆ ಮಾಡುತ್ತೇವೆ. ಕಾಂಗ್ರೆಸ್ ನಾವಿಕರಿಲ್ಲದ ದೋಣಿಯಾಗಿದೆ ಎಂದು ಹೇಳಿದ್ದಾರೆ.
PublicNext
10/03/2022 05:01 pm