ಉಡುಪಿ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಯುವ ನ್ಯಾಯವಾದಿ ಮನೋಹರ್ ಎಸ್. ಕಲ್ಮಾಡಿ ಅಧಿಕಾರ ಸ್ವೀಕಾರ ಮಾಡಿದರು.ನೂತನ "ಊಡಾ" ಅಧ್ಯಕ್ಷರಿಗೆ ಉಡುಪಿ ಜಿಲ್ಲೆ ಮತ್ತು ಉಡುಪಿ ನಗರ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್ ಮತ್ತು ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಅಭಿನಂದನಾ ಸಭೆಯಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷ ಮನೋಹರ್ ಎಸ್. ಕಲ್ಮಾಡಿ ಹಾಗೂ ಪ್ರಾಧಿಕಾರದ ಸದಸ್ಯರಾದ ಕಿಶೋರ್ ಕುಮಾರ್ ಕರಂಬಳ್ಳಿ, ಸುಮಾ ನಾಯ್ಕ್ , ಮಾಲತಿ ನಾಯಕ್, ಯೋಗೀಶ್ ಚಂದ್ರಾಧರ, ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಪ್ರಭಾಕರ್ ಪೂಜಾರಿ ಇವರನ್ನು ಶಾಲು ಹೊದೆಸಿ ಸನ್ಮಾನಿಸಲಾಯಿತು.
Kshetra Samachara
14/03/2022 06:19 pm