ಮಂಗಳೂರು: ಹಿಜಾಬ್ ಕುರಿತಾದ ಹೈಕೋರ್ಟ್ ತೀರ್ಪಿಗೆ ಅಸಮಾಧಾನ ವ್ಯಕ್ತಪಡಿಸಿ ನಡೆಸಲಾದ ಬಂದ್ ಕುರಿತು ಮಾಧ್ಯಮಗಳ ಪ್ರಶ್ನೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಮಂಗಳೂರಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಅಸಮಾಧಾನ ಇರುವವರು ಬಂದ್ ಮಾಡಿದ್ದಾರೆ. ಇನ್ನು ಹಿಂದೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ಕೊಡಬಾರದು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ನಡೆಯುತ್ತಿದೆ ಎಂದು ವರದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಯಾರೇ ಧರ್ಮದವರಾಗಲಿ ಅವರು ಕೋಮುವಾದ ಮಾಡಬಾರದು. ಎಲ್ಲ ಧರ್ಮದವರನ್ನು ಸಮಾನವಾಗಿ ಗೌರವದಿಂದ ನೋಡಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
PublicNext
19/03/2022 02:57 pm