ಪುತ್ತೂರು : ಹಿಂದೂ ಕಾರ್ಯಕರ್ತರ ಮೇಲೆ ಉದ್ದೇಶಪೂರ್ವಕವಾಗಿ ಸುಳ್ಳು ಪ್ರಕರಣ ದಾಖಲಿಸುತ್ತಿದ್ದ ಪುತ್ತೂರು ಡಿವೈಎಸ್ಪಿ ಗಾನ ಕುಮಾರ್ ವಿರುದ್ಧ ನಡೆಸಲು ಉದ್ಧೇಶಿಸಿರುವ ಪ್ರತಿಭಟನೆಯನ್ನು ಹತ್ತು ದಿನಗಳ ಕಾಲ ಮುಂದೂಡಲು ತೀರ್ಮಾನಿಸಲಾಗಿದೆ ಎಂದು ಹಿಂದೂ ಜಾಗರಣ ವೇದಿಕೆಯ ಮುಖಂಡ ಚಿನ್ಮಯ್ ರೈ ಹೇಳಿದರು.
ಪುತ್ತೂರು ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಪುತ್ತೂರು ಡಿವೈಎಸ್ಪಿ ಗಾನ ಕುಮಾರ್ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದ್ದು, ಯಾವುದೇ ಕೇಸು ಹೊಂದಿರದ ಮನೀಶ್ ಎನ್ನುವ ಎಂ.ಬಿ.ಎ ವಿಧ್ಯಾರ್ಥಿಯ ಮೇಲೆ ಪುತ್ತೂರು ನಗರ ಪೋಲೀಸ್ ಠಾಣೆಯಲ್ಲಿ ರೌಡಿಶೀಟರ್ ತೆರೆಯಲಾಗಿದೆ. ಅಲ್ಲದೆ ಕೇವಲ ಮುಚ್ಚಳಿಕೆಯಲ್ಲಿ ಮುಗಿಯುವ ಪ್ರಕರಣಗಳಲ್ಲಿ ಹಿಂದೂ ಕಾರ್ಯಕರ್ತರನ್ನು ಪ್ರಕರಣಗಳಲ್ಲಿ ಸಿಲುಕಿಸಲಾಗುತ್ತಿದೆ ಎಂದು ಆರೋಪಿಸಿದರು. ಸಂಘಟನೆಯ ಹಿರಿಯರ ಕೋರಿಕೆಯ ಮೇರೆಗೆ ಮಾರ್ಚ್ 21 ರಂದು ನಡೆಸಲು ತೀರ್ಮಾನಿಸಿರುವ ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ ಎಂದರು.
Kshetra Samachara
19/03/2022 03:36 pm