ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಶಾಸಕ ಡಾ.ಭರತ್ ಶೆಟ್ಟಿ ಹಾಗೂ ವಿಹಿಂಪ ನಿಯೋಗ ಸಿಎಂ ಭೇಟಿ

ಬೆಂಗಳೂರು: ರಾಜ್ಯ ಸರಕಾರ ಜಾರಿಗೆ ತಂದಿರುವ ಗೋಹತ್ಯಾ ನಿಷೇಧ ಕಾನೂನನ್ನು ಪೊಲೀಸ್ ಇಲಾಖೆ ಸಮರ್ಪಕವಾಗಿ ಅನುಷ್ಟಾನಕ್ಕೆ ತರಬೇಕು. ಅಕ್ರಮ ಗೋಸಾಗಾಟ ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು. ಗೋಮಾಳದ ಜಾಗವನ್ನು ಅದೇ ಉದ್ದೇಶಕ್ಕೆ ಬಳಸಬೇಕು.

ಗೋಶಾಲೆಗಳ ನಿರ್ವಹಣೆಗೆ ಅನುದಾನ ಹೆಚ್ಚಿಸಬೇಕು ಹಾಗೂ ಇತರ ಬೇಡಿಕೆಗಳೊಂದಿಗೆ ವಿಶ್ವ ಹಿಂದೂ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ್ಯ ಕಾರ್ಯಾಧ್ಯಕ್ಷರಾಗಿರುವ ಪ್ರೋ. ಎಂ ಬಿ ಪುರಾಣಿಕ್, ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್, ಮಂಗಳೂರು ನಗರ ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿ ಹಾಗೂ ಮುಖಂಡರು ಮಾನ್ಯ ಸಿಎಂ ಬಸವರಾಜ್ ಬೊಮ್ಮಾಯಿ ರವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.ಗೋವುಗಳ ಬಗ್ಗೆ ವಿಪರೀತ ಕಾಳಜಿ ಇರುವ ಮಾನ್ಯ ಮುಖ್ಯಮಂತ್ರಿಗಳು ಶೀಘ್ರವಾಗಿ ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದಾಗಿ ತಿಳಿಸಿದರು.

Edited By : PublicNext Desk
Kshetra Samachara

Kshetra Samachara

22/03/2022 07:31 pm

Cinque Terre

3.34 K

Cinque Terre

0

ಸಂಬಂಧಿತ ಸುದ್ದಿ