ಉಡುಪಿ: ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಯೋಗಿ ಆದಿತ್ಯನಾಥ್ ಅವರು ಶುಕ್ರವಾರ ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ನಡೆಯುವ ಬೃಹತ್ ಸಮಾರಂಭದಲ್ಲಿ ಪದಗ್ರಹಣಗೈಯಲಿರುವರು.
ಈ ಸಮಾರಂಭದಲ್ಲಿ ಉಪಸ್ಥಿತರಿರುವಂತೆ ಯೋಗಿಯವರು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರನ್ನೂ ಆಹ್ವಾನಿಸಿದ್ದಾರೆ .ಅದರಂತೆ ಶ್ರೀಗಳು ಗುರುವಾರ ಚೆನ್ನೈ ಯಲ್ಲಿ ಕಾರ್ಯಕ್ರಮಗಳನ್ನು ಮುಗಿಸಿ ಶುಕ್ರವಾರ ಬೆಳಿಗ್ಗೆ ಚೆನ್ನೈಯಿಂದ ವಿಮಾನದ ಮೂಲಕ ಲಕ್ನೋ ತಲುಪಿ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಮಠದ ಪ್ರಕಟಣೆ ತಿಳಿಸಿದೆ.
Kshetra Samachara
24/03/2022 09:35 am