ಮಂಗಳೂರು: ಕಾವಿ ಎಂಬುದು ಬೆಂಕಿ ಇದ್ದ ಹಾಗೆ,ಸಿದ್ದರಾಮಯ್ಯ ಆ ಬೆಂಕಿಗೆ ಕೈ ಹಾಕಿದ್ದಾರೆ. ಈ ಬೆಂಕಿಯಲ್ಲಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಭಸ್ಮವಾಗಲಿದೆ. ಇದರಲ್ಲಿ ಕಾಂಗ್ರೆಸ್ ಸರ್ವನಾಶವಾಗೋದು ಖಂಡಿತ ಎಂದು ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು.
ಸ್ವಾಮೀಜಿಗಳ ಬಗ್ಗೆ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಸಿದ್ದರಾಮಯ್ಯ ತಮ್ಮ ಮಾನಸಿಕ ಸ್ಥಿಮಿತವನ್ನು ಕಳೆದುಕೊಂಡಿದ್ದಾರೆ. ವಿಧಾನಸಭೆಯಲ್ಲಿ ಒಬ್ಬ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ದೇಶದ ಸಂಸ್ಕೃತಿ ಪರಂಪರೆ ಹಾಗೂ ಗುರು ಪೀಠಗಳ ಬಗ್ಗೆ ಅತಿ ಹೆಚ್ಚು ತಿಳಿದುಕೊಂಡವರು.
ಆದರೆ ಅವರು ಗುರುಪೀಠಗಳಿಗೆ ಗುರು ಸಂಸ್ಕೃತಿ ಗೆ ಅವಹೇಳನ, ಅವಮಾನ ಮಾಡಿದ್ದು ಸರಿಯಲ್ಲ. ಹಿಂದಿನಿಂದಲೂ ಸಿದ್ದರಾಮಯ್ಯ ಅವರಿಗೆ ಹಿಂದೂ ಸಂಸ್ಕೃತಿಯ ಬಗ್ಗೆ ಗೌರವವಿಲ್ಲ ಎಂದು ಹೇಳಿದರು.
ತಾನು ನಾಸ್ತಿಕವಾದಿ ಎಂದು ಹೇಳುವ ಅವರು ಕದ್ದುಮುಚ್ಚಿ ದೇವಸ್ಥಾನಗಳಿಗೆ ಹೋಗುತ್ತಾರೆ. ಧರ್ಮಸ್ಥಳಕ್ಕೆ ಮಾಂಸಾಹಾರ ಸೇವಿಸಿ ಹೋದ್ರೆ ಏನು? ಎಂದು ಸವಾಲು ಹಾಕಿದ್ದ ಸಿದ್ದರಾಮಯ್ಯ ಬಳಿಕ ತಮ್ಮ ಮುಖ್ಯಮಂತ್ರಿ ಸ್ಥಾನವನ್ನೇ ಕಳೆದುಕೊಳ್ಳಬೇಕಾಯಿತು ಎಂದು ಮಂಗಳೂರಿನಲ್ಲಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.
PublicNext
26/03/2022 02:37 pm