ಉಡುಪಿ: ಕಾರ್ಮಿಕರ ಮೇಲೆ ಪರಿಣಾಮ ಬೀರುವ ಕೇಂದ್ರ ಸರಕಾರದ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ಸೋಮವಾರ ಹಾಗೂ ಮಂಗಳವಾರ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಅದರಂತೆ ಇವತ್ತು ಉಡುಪಿಯಲ್ಲಿ ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಕಾರ್ಮಿಕರು ಉಡುಪಿಯ LIC ಕಚೇರಿ ಬಳಿಯಿಂದ ಮೆರವಣಿಗೆ ಹೊರಟು ಜೋಡುಕಟ್ಟೆ ಮಾರ್ಗವಾಗಿ ಅಜ್ಜರಕಾಡು ಹುತಾತ್ಮ ಸ್ಮಾರಕ ಬಳಿ ಪ್ರತಿಭಟನೆ ನಡೆಸಿದರು. ಕೇಂದ್ರ ಸರಕಾರದ ಖಾಸಗೀಕರಣ, ಕಾರ್ಮಿಕ ವಿರೋಧಿ ನೀತಿ ವಿರುದ್ಧ ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
Kshetra Samachara
28/03/2022 01:52 pm