ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಣಿಪಾಲ: ಎಡಪಕ್ಷಗಳಿಂದ ಭಾರೀ ಪ್ರತಿಭಟನೆ: ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಲು ಯತ್ನ!

ಮಣಿಪಾಲ: ಕೇಂದ್ರ ಸರ್ಕಾರದ ವಿರುದ್ಧ ಉಡುಪಿಯಲ್ಲಿ ಎಡಪಕ್ಷಗಳ ಪ್ರತಿಭಟನೆ ಇಂದು ಕೂಡ ಮುಂದುವರೆದಿದೆ.

ಕಾರ್ಮಿಕ ವಿರೋಧಿ ಕಾನೂನುಗಳನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿ ಇವತ್ತು ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಯಿತು.

ಮೆರವಣಿಗೆಯಲ್ಲಿ ಭಾಗವಹಿಸಿದ ಸಾವಿರಾರು ಪ್ರತಿಭಟನಕಾರರು ಬೆಲೆ ಏರಿಕೆ ವಿರುದ್ಧ ಧಿಕ್ಕಾರ ಕೂಗಿದರು. ಮೆರವಣಿಗೆ ಕೊನೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರನ್ನು‌ ಪೊಲೀಸರು ತಡೆದ ಪ್ರಸಂಗ ನಡೆಯಿತು.ಈ ವೇಳೆ ಡಿ.ಸಿ ಕಚೇರಿ ಗೇಟ್ ಮುಂದೆ ಪೊಲೀಸರ ಜೊತೆ ವಾಗ್ವಾದ ನಡೆಯಿತು. ಕೊನೆಗೆ ಆಚಾರ್ಯ ಸರ್ಕಲ್‌ಗೆ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ಆಗಮಿಸಿ ಪ್ರತಿಭಟನಕಾರರಿಂದ ಮನವಿ ಪತ್ರ ಸ್ವೀಕರಿಸಿದರು.

Edited By : Manjunath H D
Kshetra Samachara

Kshetra Samachara

29/03/2022 04:30 pm

Cinque Terre

8.24 K

Cinque Terre

0

ಸಂಬಂಧಿತ ಸುದ್ದಿ