ಮಂಗಳೂರು: ಜನಾಂಗ ದ್ವೇಷಿಗಳಿಗೆ ಪ್ರವೇಶವಿಲ್ಲ ಎಂಬ ಘೋಷ ವಾಕ್ಯದೊಂದಿಗೆ ಎಸ್‌ಎಫ್‌ಐ ನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಮಂಗಳೂರು ವಿವಿ ಕಾಲೇಜು ಬಳಿ ಪ್ರತಿಭಟನೆ ನಡೆಯಿತು.
ಮಂಗಳೂರು ವಿವಿ ವಿದ್ಯಾರ್ಥಿ ಪರಿಷತ್ ಉದ್ಘಾಟನೆಗೆ ಕಲ್ಲಡ್ಕ ಪ್ರಭಾಕರ ಭಟ್ ರನ್ನು ಆಹ್ವಾನಿಸಿದ್ದನ್ನು ವಿರೋಧಿಸಿ ವಿವಿ ಕುಲಪತಿ ಹಾಗೂ ಆಡಳಿತ ಮಂಡಳಿ ವಿರುದ್ಧ ಎಸ್‌ಎಫ್‌ಐ ಪ್ರತಿಭಟನೆ ನಡೆಸಿತು.
ಪ್ರತಿಭಟನೆ ಉದ್ದೇಶಿಸಿ ಎಸ್‌ಎಫ್‌ಐನ ಮಾಜಿ ಮುಖಂಡ ಮನೋಜ್ ವಾಮಂಜೂರು ಮಾತನಾಡಿದರು. ಜಿಲ್ಲಾ ಮುಖಂಡರಾದ ಮಾಧುರಿ ಬೋಳಾರ, ಜಿಲ್ಲಾ ಸಂಚಾಲಕ ವಿನೀತ್ ದೇವಾಡಿಗ, ಸಹ ಸಂಚಾಲರಾದ ವಿನೂಷ ರಮಣ, ಹನುಮಂತ, ಬಾಷಿತ್, ಸಿನಾನ್, ಜೀವನ್, ಪೃಥ್ವಿ, ಪ್ರಥಮ್ ಮೊದಲಾದವರು ಭಾಗವಹಿಸಿದ್ದರು.
Kshetra Samachara
30/03/2022 09:23 pm