ಉಡುಪಿ: ಹಲಾಲ್ ಚಿಕನ್ ನ್ನು ಹಿಂದೂಗಳು ಬಾಯ್ಕಾಟ್ ಮಾಡುವುದರಲ್ಲಿ ತಪ್ಪಿಲ್ಲ.ಆದರೆ ಹಲಾಲ್ ಅಂಗಡಿಯನ್ನ ಬಂದ್ ಮಾಡಿ ಎಂದು ಹಿಂದೂಗಳು ಒತ್ತಾಯ ಮಾಡಿದರೆ ಅದು ತಪ್ಪಾಗುತ್ತದೆ ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಹಲಾಲ್ ಮಾಂಸ ತಿನ್ನಬೇಡಿ ಎಂಬ ಕರೆ ಸರಿಯಾಗಿದೆ. ಯಾಕೆಂದರೆ ಕೋಳಿಯನ್ನು ಹಲಾಲ್ ಮಾಡಿ ಅಲ್ಲಾಹುವಿಗೆ ಸಮರ್ಪಣೆ ಮಾಡುವುದು ಇಸ್ಲಾಂ ಪದ್ಧತಿ. ಈ ಬಗ್ಗೆ ಹಿಂದೂ ಸಂಘಟನೆಗಳು ಜನ ಜಾಗೃತಿ ಮೂಡಿಸುವುದು ತಪ್ಪಲ್ಲ ಎಂದರು.
ಹಿಂದೂ ಧಾರ್ಮಿಕ ಶ್ರದ್ದಾ ಕೇಂದ್ರಗಳಲ್ಲಿ ಮುಸಲ್ಮಾನ ವ್ಯಾಪಾರಿಗಳಿಗೆ ತಡೆ ಇದೆ. ಮುಸಲ್ಮಾನ ಸಮಾಜ ಸ್ವಲ್ಪ ಸುಧಾರಣೆ ಹೊಂದಬೇಕಾಗುತ್ತದೆ. ನಾವು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಇದ್ದೇವೆ. ಮುಸಲ್ಮಾನರು ಧರ್ಮಾಚರಣೆ ಮಾಡುವುದಕ್ಕೆ ಯಾವುದೇ ಆಕ್ಷೇಪಗಳು ಇಲ್ಲ.
ಭಾರತದ ಪ್ರಜೆಯಾಗಿ ಅವರ ಕರ್ತವ್ಯ ಏನು ಎಂದು ಮೊದಲು ತಿಳಿದುಕೊಳ್ಳಬೇಕು. ಮುಸಲ್ಮಾನರು ಹಕ್ಕುಗಳ ಬಗ್ಗೆ ಮಾತನಾಡುತ್ತಾರೆ. ಕರ್ತವ್ಯಗಳ ಬಗ್ಗೆ ಮಾತನಾಡುವುದಿಲ್ಲ. ಮುಸ್ಲಿಮರು ಕರ್ತವ್ಯವನ್ನು ಮರೆತಿರುವುದರಿಂದ ಹಿಂದೂ ಸಮಾಜ ಜಾಗೃತವಾಗಿದೆ. ಹಿಂದೂ ಧರ್ಮೀಯರು ಯಾವಾಗಲೂ ಸಹಿಷ್ಣುಗಳು. ನಮ್ಮದು ವಸುದೈವ ಕುಟುಂಬಕಂ ಎಂದು ಹೇಳಿಕೊಂಡು ಬಂದಿರುವ ಸಮಾಜ. ಇತ್ತೀಚೆಗೆ ಅತಿರೇಕದ ನಡವಳಿಕೆಗಳು ಕಂಡುಬಂದಾಗ ಈ ತರಹದ ಬೆಳವಣಿಗೆಗಳಾಗಿವೆ ಎಂದು ಹೇಳಿದರು.
PublicNext
01/04/2022 12:38 pm