ಕಾರ್ಕಳ: ಭಾನುವಾರ ನನ್ನ ಮನೆದೇವರು ಮಾಂಸ ತಿನ್ನಲ್ಲ. ಸೋಮವಾರ ಮಾಂಸ ತಿನ್ನುವ ಅಭ್ಯಾಸ ಇಲ್ಲ, ಮಂಗಳವಾರ ತಿನ್ನದೇ ಇರೋದೇ ಇಲ್ಲ..ಹಲಾಲ್ ಜಟ್ಕಾ ಇಂಥದ್ದನ್ನೆಲ್ಲ ಕೆಲವು ವ್ಯಕ್ತಿಗಳು, ಪಕ್ಷಗಳು ಸೃಷ್ಟಿ ಮಾಡಿವೆ.
ಕೆಲ ವ್ಯಕ್ತಿಗಳು ಆಡುತ್ತಿರುವ ಆಟ ಇದು ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ.
ಉಡುಪಿ ಜಿಲ್ಲೆಯ ನಿಟ್ಟೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಮಾಧ್ಯಮದ ಜೊತೆ ಮಾತನಾಡಿದರು.
ಯಾರು ಯಾವುದನ್ನು ಪೂಜೆ ಮಾಡುತ್ತಾರೆ, ಅದನ್ನು ಮಾಡಿಕೊಳ್ಳಬೇಕು.ಅವರವರು ಅವರ ಪದ್ದತಿಯನ್ನು ಮುಂದುವರೆಸಿಕೊಂಡು ಹೋಗಲಿ.
ಮುಸಲ್ಮಾನರು ಹಲಾಲ್ ಮಾಡುವುದಾದರೆ ಮಾಡಲಿ. ಹಿಂದೂಗಳು ಜಟಕಾ ಮಾಡುವುದಾದರೆ ಮಾಡಿಕೊಂಡು ಹೋಗಲಿ.ಮುಸಲ್ಮಾನರು ನಮ್ಮ ಮನೆಗೆ ಬಂದು ಏನೂ ಒತ್ತಡ ಹಾಕುವುದಿಲ್ಲ .ನಾವು ಯಾರೂ ಮುಸಲ್ಮಾನರ ಮನೆಗೆ ಹೋಗಿ ಒತ್ತಡ ಹಾಕುವುದಿಲ್ಲ ಎಂದು ಹೇಳಿದ್ದಾರೆ.
ಸಮಾಜವನ್ನು ಒಡೆಯುವ ದಿಕ್ಕಿನಲ್ಲಿ ಕುತಂತ್ರ ಮಾಡಲಾಗುತ್ತಿದೆ.ಈ ತರಹದ ವಿಚಾರದಲ್ಲಿ ನಾನು ರಾಜಕಾರಣ ಮಾಡಲು ಇಷ್ಟ ಪಡಲ್ಲ.
ಚುನಾವಣೆ ಬಂದಾಗ ಒಬ್ಬರಿಗೊಬ್ಬರು ಬಹಿರಂಗವಾಗಿ ತೊಡೆತಟ್ಟೊಣ.ಚುನಾವಣೆ ಬಂದಾಗ ನಾನೇನು ಮಾಡಿದ್ದೇನೆ ,ನೀನ್ ಏನ್ ಮಾಡಿದ್ದಿ ಎಂಬುದನ್ನು ಜನಗಳ ಮುಂದೆ ಇಡೋಣ ಎಂದು ಕಾರ್ಕಳದ ನಿಟ್ಟೆಯಲ್ಲಿ ಸಚಿವ ಈಶ್ವರಪ್ಪ ಹೇಳಿದ್ದಾರೆ.
Kshetra Samachara
03/04/2022 02:48 pm