ಮಂಗಳೂರು: ಬಿಜೆಪಿ ವಿರುದ್ಧ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ವಿಚಾರಕ್ಕೆ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಸಚಿವ ಕೆ.ಎಸ್. ಈಶ್ವರಪ್ಪ, 'ಬಿಜೆಪಿ ಬಗ್ಗೆ ಟೀಕೆ ಮಾಡಲು ಅವರಿಗೆ ಶಕ್ತಿನೂ ಇಲ್ಲ ಅಧಿಕಾರವೂ ಇಲ್ಲ. ಬಿಜೆಪಿ ಬಗ್ಗೆ ಟೀಕೆ ಮಾಡಿದವರೆಲ್ಲರೂ ನೆಗೆದು ಬಿದ್ದು ಹೋದರು. ಕುಮಾರಸ್ವಾಮಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿಲ್ಲ. ಅವರು ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ವಿರುದ್ಧ ಕಾಂಪಿಟೇಷನ್‌ಗೆ ಇಳಿದಿದ್ದಾರೆ. ಮುಸ್ಲಿಮರ ಓಲೈಕೆಗಾಗಿ ಈ ರೀತಿ ಕಾಂಪಿಟೇಷನ್ಗೆ ಇಳಿದಿದ್ದಾರೆ' ಎಂದರು.
PublicNext
03/04/2022 04:06 pm