ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: 'ಸ್ವಾತಂತ್ರ್ಯ ಬಂದಾಗಿನಿಂದಲೂ ಕಾಂಗ್ರೆಸ್‌ ಮುಸ್ಲಿಮರನ್ನ ಮೆಚ್ಚಿಸುವ ಕೆಲಸ ಮಾಡುತ್ತಿದೆ'

ಮಂಗಳೂರು: ಮುಸ್ಲಿಮರನ್ನು ಮೆಚ್ಚಿಸುವ ಕೆಲಸವನ್ನು ಸ್ವಾತಂತ್ರ್ಯ ಬಂದಾಗಿನಿಂದಲೂ ಕಾಂಗ್ರೆಸ್‌ನವರು ಇದನ್ನೇ ಮಾಡಿಕೊಂಡು ಬಂದಿದ್ದಾರೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ಮಂಗಳೂರಿನಲ್ಲಿ ಪ್ರತಿಕ್ರಿಯೆ‌ ನೀಡಿದ ಸಚಿವರು, 'ಕೋಮು ವಿಚಾರವನ್ನು ಬಿಜೆಪಿ, ಭಜರಂಗದಳ ಮಾಡುತ್ತಿದೆ ಅಂತ ದೊಡ್ಡ ಧ್ವನಿಯಲ್ಲಿ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಇದೆಲ್ಲಾ ರಾಹುಲ್ ಗಾಂಧಿ ಅವರನ್ನು ಮೆಚ್ಚಿಸಲು ಮಾಡುತ್ತಿರುವ ಆರೋಪಗಳು ಅಷ್ಟೇ. ಅದಲ್ಲದೇ ಇದು ಸೋನಿಯಾ ಗಾಂಧಿ ಅವರನ್ನು ತಲುಪಲಿ ಅಂತ ಹಾಗೆ ಮಾಡುತ್ತಿದ್ದಾರೆ' ಎಂದು ವ್ಯಂಗ್ಯವಾಡಿದರು.

ಇನ್ನು ಉಡುಪಿಯಲ್ಲಿ 6 ವಿದ್ಯಾರ್ಥಿನಿಯರು ಹಿಜಾಬ್ ವಿಚಾರವನ್ನು ದೇಶದ ಮಟ್ಟಕ್ಕೆ ತೆಗೆದುಕೊಂಡು ಹೋದರು. ಆರು ಜನ ವಿದ್ಯಾರ್ಥಿನಿಯರೊಂದಿಗೆ ಕಾಂಗ್ರೆಸ್ ಎಸ್‌ಡಿಪಿಐ ಪಿಎಫ್ಐ ಕರೆದು ಮಾತನಾಡಿದ್ದಾರೆ. ರಾಜ್ಯದಲ್ಲಿ ಇಂದು ಈ ಪರಿಸ್ಥಿತಿ ಬರ್ತಾ ಇತ್ತಾ.? ಇದನ್ನು ಹುಟ್ಟುಹಾಕಿದ್ದು ಅವರೇ ಎಂದು ಕಿಡಿಕಾರಿದ ಅವರು, ವಿವಾದ ಹುಟ್ಟುಹಾಕಿ ಭಜರಂಗದಳ, ಬಿಜೆಪಿ, ಸಂಘ ಪರಿವಾರದವರು ಮಾಡ್ತಾ ಇದ್ದಾರೆ ಅಂತ ಹೇಳ್ತಾ ಇದ್ದಾರೆ ಎಂದು ಕಿಡಿಕಾರಿದರು.

Edited By : Shivu K
PublicNext

PublicNext

03/04/2022 05:20 pm

Cinque Terre

52.91 K

Cinque Terre

5

ಸಂಬಂಧಿತ ಸುದ್ದಿ