ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಪಕ್ಷ ಸಂಸ್ಥಾಪಕರ ತ್ಯಾಗ ಬಲಿದಾನ ಕಾರ್ಯಕರ್ತರಿಗೆ ಪ್ರೇರಣೆ : ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಕಾಂಗ್ರೆಸ್ ನ ದುರಾಡಳಿತ, ತುಷ್ಟೀಕರಣ ನೀತಿ ಅಂದು ಡಾ. ಶ್ಯಾಮ ಪ್ರಸಾದ್ ಮುಖರ್ಜಿ, ಪಂಡಿತ್ ದೀನದಯಾಳ್ ಉಪಾಧ್ಯಾಯರಂತಹ ದಿವ್ಯ ಚೇತನಗಳಿಂದ ಭಾರತೀಯ ಜನ ಸಂಘದ ಹುಟ್ಟಿಗೆ ಕಾರಣವಾಯಿತು. ಬಳಿಕ ರಾಷ್ಟ್ರೀಯತೆ ಸಹಿತ ಪಂಚ ನಿಷ್ಠೆಗಳ ತಳಹದಿಯಲ್ಲಿ ಅಟಲ್ ಬಿಹಾರಿ ವಾಜಪೇಯಿ, ಲಾಲ್ ಕೃಷ್ಣ ಅಡ್ವಾಣಿಯವರಂತಹ ಧೀಮಂತ ನಾಯಕರ ಪರಿಶ್ರಮದಿಂದ ಎಪ್ರಿಲ್ 6, 1980ರಂದು ಭಾರತೀಯ ಜನತಾ ಪಾರ್ಟಿ ಸ್ಥಾಪನೆಗೊಂಡಿತು. ಪಕ್ಷದ ಸಂಸ್ಥಾಪಕರ ತ್ಯಾಗ, ಬಲಿದಾನ, ಆದರ್ಶಗಳು ಕಾರ್ಯಕರ್ತರಿಗೆ ಸದಾ ಪ್ರೇರಣಾ ಶಕ್ತಿಯಾಗಿದೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಎ.6ರಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಸ್ಥಾಪನಾ ದಿನಾಚರಣೆಯ ಅಂಗವಾಗಿ ಪಕ್ಷದ ಧ್ವಜಾರೋಹಣವನ್ನು ನೆರವೇರಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

Edited By : PublicNext Desk
Kshetra Samachara

Kshetra Samachara

06/04/2022 06:17 pm

Cinque Terre

4.26 K

Cinque Terre

0

ಸಂಬಂಧಿತ ಸುದ್ದಿ