ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಪ್ಪಿನಂಗಡಿ: ಗುಂಡ್ಯದಲ್ಲಿ ನೈತಿಕ ಪೊಲೀಸ್ ಗಿರಿ ಆರೋಪದಲ್ಲಿ ಇಬ್ಬರ ಬಂಧನ: ಪುತ್ತೂರು ಶಾಸಕರ ವಿರುದ್ಧ ಹಿಂದೂ ಕಾರ್ಯಕರ್ತರ ಆಕ್ರೋಶ

ಉಪ್ಪಿನಂಗಡಿ: ನಿನ್ನೆ ನಡೆದ ಅನ್ಯಕೋಮಿನ ಯುವಕ ಹಾಗೂ ಯುವತಿಯ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತರ ಬಂಧನ ಮಾಡಿದ್ದನ್ನ ಆಕ್ಷೇಪಿಸಿ ಹಿಂದೂ ಸಂಘಟನೆ ಕಾರ್ಯಕರ್ತರು ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಸಂಚರಿಸುತಿದ್ದ ಬಸ್ ತಡೆದು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಿನ್ನೆ ರಾತ್ರಿ ನಡೆದಿದೆ.

ಹಲ್ಲೆಗೊಳಗಾದ ಯುವಕ ನೀಡಿದ ದೂರಿನಂತೆ ಹಿಂದೂ ಕಾರ್ಯಕರ್ತರ ಬಂಧನ ಮಾಡಿದ್ದನ್ನ ಆಕ್ಷೇಪಿಸಿ ಹಿಂದೂ ಸಂಘಟನೆ ಕಾರ್ಯಕರ್ತರು ಪುತ್ತೂರು ಬಿಜೆಪಿ ಶಾಸಕ ಸಂಜೀವ ಮಠಂದೂರು ಅವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳವಾರ ತಡರಾತ್ರಿ ದ.ಕ ಜಿಲ್ಲೆಯ ಉಪ್ಪಿನಂಗಡಿ ಬಳಿ ಶಾಸಕ ಸಂಜೀವ ಮಠಂದೂರು ಅವರನ್ನು ತಡೆದು ಕಾರ್ಯಕರ್ತರು ವಾಗ್ವಾದ ನಡೆಸಿದ್ದಾರೆ. ತಾನು ಮನೆಯಲ್ಲಿದ್ದೇನೆ ಎಂದು ಹೇಳಿ ಶಾಸಕ ಮಠಂದೂರು ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಉಪ್ಪಿನಂಗಡಿ ಬಳಿ ತಡೆದು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಸಕರು ಕಾರ್ಯಕರ್ತರ ಪರ ನಿಂತಿಲ್ಲ ಎಂಬುದು ಶಾಸಕರ ವಿರುದ್ದ ಅಸಮಾಧಾನ ವ್ಯಕ್ತಪಡಿಸಲು ಕಾರಣ ಎನ್ನಲಾಗಿದೆ. ಅಲ್ಲದೇ ಇದೊಂದು ಬಿಜೆಪಿ ಸರ್ಕಾರದ ಹಿಂದೂ ವಿರೋಧಿ ಧೋರಣೆ ಎಂದು ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು.

ಗುಂಡ್ಯದಲ್ಲಿ ನಡೆದ ವಿಭಿನ್ನ ಕೋಮಿನ ಯುವತಿ ಯುವಕನ ಮೇಲಿನ ಹಲ್ಲೆ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ಹಿಂದೂ ಸಂಘಟನೆ ಕಾರ್ಯಕರ್ತರಾದ ಬಾಲಚಂದ್ರ (35) ಮತ್ತು ರಂಜಿತ್( 31) ಎಂಬವರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದಿದ್ದರು. ದ‌.ಕ ಜಿಲ್ಲೆಯ ಪುತ್ತೂರು ತಾಲೂಕಿನ ಗುಂಡ್ಯ ಎಂಬಲ್ಲಿ ನಿನ್ನೆ ಸಂಜೆ ಈ ಘಟನೆ ನಡೆದಿತ್ತು. ಅನ್ಯ ಕೋಮಿನ ಆಟೋ ಚಾಲಕನ ಜೊತೆ ವೇಣೂರಿನ ಹಿಂದೂ ಯುವತಿ ಗುಂಡ್ಯಕ್ಕೆ ಬಂದಿದ್ದಳು. ಈ ಬಗ್ಗೆ ಮಾಹಿತಿ ಪಡೆದು ಜೋಡಿಯನ್ನು ಹಿಂದೂ ಕಾರ್ಯಕರ್ತರು ನೆಲ್ಯಾಡಿ ಪೊಲೀಸರ ವಶಕ್ಕೆ ಒಪ್ಪಿಸಿದ್ದರು. ನಂತರ ನಡೆದ ಬೆಳವಣಿಗೆಯಲ್ಲಿ ಯುವಕ ನಜೀರ್ ಎಂಬಾತ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿ, ತಾನು ತನ್ನ ಪ್ರಿಯತಮೆ‌ ಪೂಜಾ ಜೊತೆ ಸಂಚರಿಸುತ್ತಿದ್ದ ವೇಳೆ ತಡೆದು ಹಲ್ಲೆ ನಡೆಸಿದ್ದಾಗಿ ಹಲವರ ವಿರುದ್ಧ ದೂರು ನೀಡಿದ್ದ.

Edited By :
Kshetra Samachara

Kshetra Samachara

06/04/2022 06:17 pm

Cinque Terre

14.86 K

Cinque Terre

0

ಸಂಬಂಧಿತ ಸುದ್ದಿ