ಪುತ್ತೂರು: ಹೊರ ರಾಜ್ಯದಿಂದ ಬಂದ ಉದ್ಯೋಗಿಗಳಿಗೆ ಹಾಗೂ ವ್ಯಾಪಾರಿಗಳಿಗೆ ಕನ್ನಡ ಕಲಿಸುವ "ಮಾತಾಡು ಕನ್ನಡ ಮಾತಾಡು" ಎನ್ನುವ ವಿಶೇಷ ಕಾರ್ಯಕ್ರಮವನ್ನು ಪುತ್ತೂರು ತಾಲೂಕು ಸಾಹಿತ್ಯ ಪರಿಷತ್ ಮತ್ತು ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಹಮ್ಮಿಕೊಂಡಿದೆ.
ಈ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮಕ್ಕೆ ಏಪ್ರಿಲ್ 8 ರಂದು ಚಾಲನೆ ನೀಡಲಾಯಿತು. ಪುತ್ತೂರಿನ ದರ್ಬೆ ವೃತ್ತದಿಂದ ಆರಂಭಗೊಂಡ ಈ ಪ್ರೇರಣಾ ಜಾಥಾವನ್ನ ಪುತ್ತೂರು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿದರು.
ಬ್ಯಾಂಕ್ ಸೇರಿದಂತೆ ಹಲವು ಸರಕಾರಿ ಮತ್ತು ಖಾಸಗಿ ಕಚೇರಿಗಳಲ್ಲಿ ಹೊರ ರಾಜ್ಯದ ಉದ್ಯೋಗಿಗಳ ಸಂಖ್ಯೆ ಹೆಚ್ಚಾಗಿದ್ದು, ಸಾರ್ವಜನಿಕರ ಜೊತೆ ಸ್ಥಳೀಯ ಭಾಷೆಯಲ್ಲೇ ವ್ಯವಹರಿಸಬೇಕೆಂಬ ನಿಯಮವೂ ಇದೆ. ಇಂತಹ ಉದ್ಯೋಗಿಗಳು ಕನ್ನಡ ಸಾಹಿತ್ಯ ಪರಿಷತ್‌ನ ಈ ಕಾರ್ಯಕ್ರಮವನ್ನು ಸದುಪಯೋಗಿಸಬೇಕೆಂದು ಅವರು ಮನವಿ ಮಾಡಿದರು.
=====
Kshetra Samachara
08/04/2022 02:00 pm