ಮಂಗಳೂರು: ಬ್ಯಾರಿ ಭವನ ನಿರ್ಮಾಣದ ಶಂಕು ಸ್ಥಾಪನೆಯೇ ರಹೀಂ ಉಚ್ಚಿಲ್ ಅವರ ಪದಚ್ಯುತಿಗೆ ಕಾರಣ ಎನ್ನಲಾಗುತ್ತಿದೆ.
ಇತ್ತೀಚೆಗೆ ಬಿಜೆಪಿ ನಾಯಕರ ವಿರೋಧದ ಮಧ್ಯೆಯೂ ನಗರ ಹೊರವಲಯದ ತೊಕ್ಕೊಟ್ಟುವಿನಲ್ಲಿ ಬ್ಯಾರಿ ಭವನ ನಿರ್ಮಾಣಕ್ಕೆ ರಹೀಂ ಉಚ್ಚಿಲ್ ಶಂಕು ಸ್ಥಾಪನೆಗೆ ಸಿದ್ಧತೆಗಳನ್ನು ಮಾಡಿ ಕೊಂಡಿದ್ದರು. ಈ ವೇಳೆ ಕೆಲ ಬಿಜೆಪಿ ನಾಯಕರು ಮತ್ತು ಹಿಂದೂ ಸಂಘಟನೆಗಳ ನಾಯಕರು ಕಾರ್ಯಕರ್ತರು ವಿರೋಧ ವ್ಯಕ್ತ ಪಡಿಸಿ ಸ್ಥಳದಲ್ಲಿ ಪ್ರತಿಭಟನೆಯನ್ನೂ ಮಾಡಿದ್ದರು.
ಈ ಮಧ್ಯೆ ಬಿಜೆಪಿ ನಾಯಕರು ಮತ್ತು ಹಿಂದೂ ಸಂಘಟನೆಗಳ ಪ್ರತಿಭಟನೆಗೆ ಕ್ಯಾರೇ ಎನ್ನದ ರಹೀಂ ಉಚ್ಚಿಲ್ ಶಂಕು ಸ್ಥಾಪನೆಯನ್ನು ನೆರವೇರಿದ್ದರು.ಪ್ರತಿಭಟನೆಗೆ ಮಣಿಯದ ಹಿನ್ನೆಲೆಯಲ್ಲಿ ರಾಜಕೀಯ ನಾಯಕರು ಮತ್ತು ಸಂಘಟನೆಗಳ ನಾಯಕರು ಬಿಜೆಪಿಯ ಹೈಕಮಾಂಡ್ ಗೆ ದೂರು ನೀಡಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಬಿಜೆಪಿ ಸರಕಾರ ಯಾವುದೇ ಕಾರಣಗಳನ್ನು ನೀಡದೇ, ಬ್ಯಾರಿ ಅಕಾಡೆಮಿಯ ಅಧ್ಯಕ್ಷ ಸ್ಥಾನದಿಂದ ರಹೀಂ ಉಚ್ಚಿಲ್ ಅವರನ್ನು ಪದಚ್ಯುತಿಗೊಳಿಸಿ ಆದೇಶಿಸಿದೆ ಎನ್ನಲಾಗಿದೆ.
Kshetra Samachara
08/04/2022 03:51 pm