ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ಅನಾರೋಗ್ಯದಿಂದ ಚೇತರಿಸಿಕೊಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್, ಕಾರ್ಯಕ್ರಮದಲ್ಲಿ ಭಾಗಿ

ಬಂಟ್ವಾಳ: ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಆರೆಸ್ಸೆಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ಶನಿವಾರ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ನಡೆದ ಸೀತಾ ರಸೋಯಿ- ಪಾಕಶಾಲಾ ಸಮುಚ್ಚಯ ಉದ್ಘಾಟನೆಯಲ್ಲಿ ಪಾಲ್ಗೊಂಡರು.

ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ ಸಹಕಾರದಲ್ಲಿ ಎರಡು ಭೋಜನಾಲಯ, ಒಂದು ಅಡುಗೆ ಶಾಲೆ ಹಾಗೂ ಕಚೇರಿ, ಉಗ್ರಾಣವನ್ನೊಳಗೊಂಡ 4 ಮಹಡಿಯುಳ್ಳ ಕಟ್ಟಡವಿದು. ಈ ಸಂದರ್ಭ ಮಾತನಾಡಿದ ಭಟ್, ಹೃದಯಕ್ಕೆ ಬೇಕಾದ ಸಂಸ್ಕಾರ ನೀಡುವ ಕಲೆ ಇದ್ದರಷ್ಟೇ ಜ್ಞಾನಿಯಾಗುತ್ತಾನೆ ಎಂದರು. ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ.ಸೋಮಶೇಖರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಅತಿಥಿಯಾಗಿ ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಧರ್ಮದರ್ಶಿಗಳಾದ ಡಾ. ಭೀಮೇಶ್ವರ ಜೋಶಿ, ಒಡಿಯೂರಿನ ಸಾಧ್ವಿ ಶ್ರೀ ಮಾತಾನಂದಮಯಿ, ಕೊಲ್ಲೂರು ದೇವಸ್ಥಾನದ ಅಧ್ಯಕ್ಷ ಡಾ. ಚಂದ್ರಶೇಖರ ಶೆಟ್ಟಿ ಕೆರಾಡಿ, ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

09/04/2022 06:02 pm

Cinque Terre

3.86 K

Cinque Terre

0

ಸಂಬಂಧಿತ ಸುದ್ದಿ