ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಣಿಪಾಲ: ಸಂಘರ್ಷ ವಾತಾವರಣದಿಂದ ಕೈಗಾರಿಕೆಗೆ ಸಮಸ್ಯೆಯಾಗುತ್ತದೆ ಎಂಬುದು ಸುಳ್ಳು; ಸಿಎಂ ಸ್ಪಷ್ಟನೆ

ಮಣಿಪಾಲ: ರಾಜ್ಯದಲ್ಲಿ ಧರ್ಮ ಸಂಘರ್ಷದಿಂದ ಉದ್ಯಮಗಳಿಗೆ ಹಿನ್ನಡೆ ಆಗುವುದಿಲ್ಲ. ಕೈಗಾರಿಕೆಗೆ ಸಮಸ್ಯೆಯಾಗುತ್ತದೆ ಎಂಬುದು ಸುಳ್ಳು. ರಾಜ್ಯದ ಪ್ರಸಕ್ತ ಬೆಳವಣಿಗೆಗಳಿಂದ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಉಡುಪಿಯ ಮಣಿಪಾಲದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಅತಿ ಹೆಚ್ಚು ಎಫ್‌ಡಿಐ ಹೂಡಿಕೆ ನಮ್ಮ ರಾಜ್ಯಕ್ಕೆ ಬರುತ್ತಿದೆ. ಈ ಕ್ವಾರ್ಟರ್‌ನಲ್ಲಿ ಶೇ 43ರಷ್ಟು ಹೂಡಿಕೆ ನಮ್ಮ ರಾಜ್ಯಕ್ಕೆ ಬಂದಿದೆ. ಪ್ರಪಂಚದ ಮೂಲೆ ಮೂಲೆಗಳಿಂದ ಹೂಡಿಕೆದಾರರು ಬರುತ್ತಿದ್ದಾರೆ. ಕೈಗಾರಿಕೆಗಳು ನಮ್ಮ ರಾಜ್ಯ ತೊರೆಯುವ ಪ್ರಶ್ನೆಯೇ ಇಲ್ಲ ಎಂದರು.

ಕರ್ನಾಟಕದಲ್ಲಿ ಮಾನವ ಸಂಪನ್ಮೂಲ ಯಥೇಚ್ಛವಾಗಿದೆ. ಮೂಲ ಸೌಕರ್ಯದ ಗುಣಮಟ್ಟ ಬಹಳ ಚೆನ್ನಾಗಿದೆ. ದೇಶದ ಟಾಪ್ ಆರ್ ಆ್ಯಂಡ್ ಡಿ ಸೆಂಟರ್ ನಮ್ಮಲ್ಲಿದೆ ಎಂದ ಅವರು ಬೇರೆ ರಾಜ್ಯಗಳಿಗೆ ಡಿಮಾಂಡ್ ಇಲ್ಲ. ಹಾಗಾಗಿ ನಮಗೆ ಆಫರ್ ಕೊಡುತ್ತಾರೆ ಎಂದು ಸಿಎಂ ಹೇಳಿದ್ದಾರೆ.

Edited By : Nagesh Gaonkar
PublicNext

PublicNext

11/04/2022 10:22 pm

Cinque Terre

46.02 K

Cinque Terre

4

ಸಂಬಂಧಿತ ಸುದ್ದಿ