ಮಣಿಪಾಲ: ನಾನು ಯಾವ ವಿವಾದದಲ್ಲೂ ಬೀಳಲು ಬಯಸುವುದಿಲ್ಲ. ಯಾರು ಏನು ಹೇಳಿಕೆ ಕೊಡುತ್ತಾರೆ ಎಂಬುದು ಮುಖ್ಯವಲ್ಲ. ರಾಜ್ಯದ ಜನರ ಆಸ್ತಿಪಾಸ್ತಿ ಜೀವ ರಕ್ಷಣೆ ನಮ್ಮ ಕರ್ತವ್ಯ. ಯಾರು ಏನೇ ಹೇಳಿಕೆ ಕೊಟ್ಟರೂ ಶಾಂತಿ-ಸುವ್ಯವಸ್ಥೆ ಕಾಪಾಡುವ ವಿಚಾರದಲ್ಲಿ ರಾಜಿ ಇಲ್ಲ. ಯಾರೇ ಇರಲಿ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಉಡುಪಿಯ ಮಣಿಪಾಲದಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ನಾನಾ ತರಹದ ಒತ್ತಾಯಗಳು ಬರಬಹುದು.
ಸುಮ್ಮನೆ ವಿವಾದವನ್ನು ಬೆಳೆಸಲು ಈ ರೀತಿ ಮಾಡುತ್ತಾರೆ. ಸಮಸ್ಯೆ ಪರಿಹಾರ ಮಾಡಲು ದಿಟ್ಟ ಕ್ರಮ ತೆಗೆದುಕೊಳ್ಳುತ್ತೇನೆ ಎಂದು
ಉಡುಪಿಯ ಮಣಿಪಾಲದಲ್ಲಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.
PublicNext
11/04/2022 10:32 pm