ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: "ಪದವಿ ಮುಖ್ಯವಲ್ಲ, ಪಕ್ಷಕ್ಕೆ ಕಾರ್ಯಕರ್ತರು ಆಸ್ತಿ" ಅಭಯಚಂದ್ರ

ಮುಲ್ಕಿ:ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾಗಿ ನೇಮಕಗೊಂಡ ಮಾಜಿ ಸಚಿವ ಕೆ ಅಭಯಚಂದ್ರ ಜೈನ್ ರವರನ್ನು ಮುಲ್ಕಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭ ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ ಪದವಿ ಮುಖ್ಯವಲ್ಲ, ಕಾರ್ಯಕರ್ತರೇ ಪಕ್ಷದ ಆಸ್ತಿಯಾಗಿದ್ದು ಮುಂಬರುವ ಚುನಾವಣೆಗಳಿಗೆ ಪೂರ್ವ ಸಿದ್ಧತೆ ನಡೆಸಿ ಮನೆ ಮನೆಗಳಿಗೆ ತೆರಳಿ ಪಕ್ಷದ ಸಿದ್ಧಾಂತ ಗಳನ್ನು ತಿಳಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪಣ ತೊಡಬೇಕು ಎಂದರು.

ಈ ಸಂದರ್ಭ ಕೆಪಿಸಿಸಿ ಕೋಆರ್ಡಿನೇಟರ್ ಹೆಚ್ ವಸಂತ ಬೆರ್ನಾಡ್, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಜಿಲ್ಲಾ ಕಾಂಗ್ರೆಸ್ ಸಮಿತಿಯ ಪುತ್ತುಬಾವ,ಪ್ರಧಾನ ಕಾರ್ಯದರ್ಶಿ ಮಂಜುನಾಥ ಕಂಬಾರ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಪೂಜಾರ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

12/04/2022 08:05 am

Cinque Terre

2.74 K

Cinque Terre

0

ಸಂಬಂಧಿತ ಸುದ್ದಿ