ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ನನ್ನ ಮೌನ ಯಾರಿಗಾದರೂ ತೊಂದರೆಯಾದರೆ ನಾನೇನು ಮಾಡಲಿ? ಸಿಎಂ ಪ್ರಶ್ನೆ

ಉಡುಪಿ: ನನ್ನ ಮೌನ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಅವರಿಗೆ ತೊಂದರೆ ಆದರೆ ನಾನೇನು ಮಾಡಲಿ? ಅವರು ಬಾಯಿಗೆ ಬಂದಂಗೆ ಮಾತನಾಡುತ್ತಾರೆ. ಮಾತಿಗೆ ಬೆಲೆ ಬರಬೇಕಾದರೆ ಭಾಷೆ ಬಹಳ ಮುಖ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಸರ್ಕಾರದಲ್ಲಿರುವವರು. ಕೆಲಸ ಮಾಡುವ ಸ್ಥಳದಲ್ಲಿ ಇದ್ದೇವೆ. ಯಾವ ಯಾವ ಸಂದರ್ಭ ಯಾವ ಕ್ರಮ ತೆಗೆದುಕೊಳ್ಳಬೇಕು ಅದನ್ನು ತೆಗೆದುಕೊಂಡಿದ್ದೇವೆ. ಶಿವಮೊಗ್ಗ ಘಟನೆಯಾದಾಗ ಕ್ರಮ ತೆಗೆದುಕೊಂಡಿದ್ದೇವೆ. ಧಾರವಾಡ ಘಟನೆ ಆದಾಗ ಕ್ರಮ ತೆಗೆದುಕೊಂಡಿದ್ದೇವೆ. ಕೋಲಾರ ಘಟನೆ ಸಂದರ್ಭ ಕ್ರಮ ತೆಗೆದುಕೊಂಡಿದ್ದೇವೆ. ಇವರ ಹಾಗೆ ಓಲೈಸುವ ರಾಜಕಾರಣ ಮಾಡಿಲ್ಲ, ಮುಂದೆಯೂ ಮಾಡಲ್ಲ ಎಂದು ಹೇಳಿದರು.

ಕೋವಿಡ್ ಮಾರ್ಗಸೂಚಿ ವಿಚಾರವಾಗಿ ಮಾತನಾಡಿದ ಸಿಎಂ, ಈ ಹಿಂದೆ ಕೊರೊನಾ ಬಂದ ಅನುಭವ ನಮ್ಮ ಜೊತೆಗಿದೆ. 1,2,3 ಅಲೆಯ ಅನುಭವದ ಹಿನ್ನೆಲೆ ಇದೆ‌. ಈ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮ ಕೈಗೊಳ್ಳುತ್ತಿದ್ದೇವೆ. ಇದಕ್ಕಾಗಿ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಹೊರಡಿಸಲಾಗಿದೆ. ಮಾರ್ಗಸೂಚಿ ಪಾಲನೆ ಆದರೆ ಯಾವುದೇ ಸಂದರ್ಭವನ್ನು ಎದುರಿಸಬಹುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಹೇಳಿದರು.

Edited By : Manjunath H D
PublicNext

PublicNext

12/04/2022 01:03 pm

Cinque Terre

23.35 K

Cinque Terre

0

ಸಂಬಂಧಿತ ಸುದ್ದಿ