ಉಡುಪಿ: ಜಾತ್ಯತೀತ ಜನತಾದಳ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಜನತಾ ಜಲಧಾರೆ ರಥಯಾತ್ರೆಯು ಏಪ್ರಿಲ್ 16ರಂದು ಉಡುಪಿ ಜಿಲ್ಲೆಗೆ ಆಗಮಿಸಲಿದೆ ಎಂದು ಜಾತ್ಯತೀತ ಜನತಾದಳ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಹೇಳಿದ್ದಾರೆ.
ಪಬ್ಲಿಕ್ ನೆಕ್ಸ್ಟ್ ಜೊತೆ ಮಾತನಾಡಿದ ಅವರು, ರಾಜ್ಯದ ಕುಡಿಯುವ ನೀರಿನ ವ್ಯವಸ್ಥೆ, ನೀರಾವರಿ ವ್ಯವಸ್ಥೆಗೆ ಸಂಬಂಧಿಸಿದಂತೆ ಪಕ್ಷದ ವರಿಷ್ಠರು ಜನತಾ ಜಲಧಾರೆ ಎಂಬ ಬೃಹತ್ ರಥಯಾತ್ರೆಯನ್ನು ಆಯೋಜಿಸಿದ್ದಾರೆ. ರಥಯಾತ್ರೆಯು ಜಿಲ್ಲೆಯ ವಾರಾಹಿ, ಸೌಪರ್ಣಿಕಾ ಮತ್ತು ಸೌರ್ಣ ನೀರನ್ನು ಸಂಗ್ರಹಿಸಿ ಗಂಗಾ ಪೂಜೆ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಏಪ್ರಿಲ್ 16ರಂದು ಶನಿವಾರ ಉಡುಪಿ ಜಿಲ್ಲಾ ಜೆಡಿಎಸ್ ವತಿಯಿಂದ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.
PublicNext
14/04/2022 08:58 pm