ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಟ್ಲ: ಬೆಲೆಯೇರಿಕೆ ವಿರುದ್ಧ ಎಸ್ ಡಿ ಪಿ ಐ ಪ್ರತಿಭಟನೆ

ವಿಟ್ಲ: ಅಗತ್ಯ ವಸ್ತುಗಳ ಮತ್ತು ಇಂಧನಗಳ ಬೆಲೆ ಏರಿಕೆ ವಿರುದ್ಧ ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್ ಡಿ ಪಿ ಐ) ವಿಟ್ಲ ಪಟ್ಟಣ ಪಂಚಾಯಿತಿ ಸಮಿತಿ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಎಸ್‌ಡಿಪಿಐ ಪುತ್ತೂರು ವಿಧಾನ ಸಭಾ ಕ್ಷೇತ್ರದ ಮುಖಂಡ ಇಬ್ರಾಹಿಂ ಸಾಗರ್ ಮಾತನಾಡಿ ದಿನೇ ದಿನೇ ಆಹಾರ ಪದಾರ್ಥಗಳಿಂದ ಹಿಡಿದು ಅನಿಲಗಳವರೆಗೂ ಬೆಲೆಯೇರಿಕೆಯಾಗಿದ್ದು, ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಉತ್ತಮ ಆಡಳಿತ ನೀಡುವಲ್ಲಿ ರಾಜ್ಯ ಮತ್ತು ಕೇಂದ್ರ ಬಿಜೆಪಿ ಸರಕಾರ ಸಂಪೂರ್ಣವಾಗಿ ವಿಫಲಗೊಂಡಿದೆ. ತಮ್ಮ ದುರಾಡಳಿತವನ್ನು ಮರೆಮಾಚುವ ಉದ್ದೇಶದಿಂದ ಜನರ ನಡುವೆ ಜಾತಿ ಧರ್ಮಗಳ ಹೆಸರಿನಲ್ಲಿ ರಾಜಕೀಯ ಮಾಡಿ ತಾವು ಒಳ್ಳೆಯವರು ಎಂಬಂತೆ ಬಿಂಬಿಸುತ್ತಿದೆ ಎಂದು ಆರೋಪಿಸಿದರು.

ವಿಟ್ಲ ನಾಡಕಚೇರಿಯಿಂದ ಹೊರಟ ಮೆರವಣಿಗೆ ವಿಟ್ಲ ಮುಖ್ಯ ರಸ್ತೆಯಲ್ಲಿ ಸಾಗಿ,ಸಂತೆ ಮಾರುಕಟ್ಟೆ ಬಳಿ ಪ್ರತಿಭಟನಾ ಸಭೆ ನಡೆಯಿತು. ಈ ಸಂದರ್ಭ ಪ್ರಮುಖರಾದ ರಿಯಾಜ್ ಕಡಂಬು ಸೇರಿದಂತೆ ಮೊದಲಾದವರು ಭಾಗವಹಿಸಿದ್ದರು.

Edited By : Manjunath H D
Kshetra Samachara

Kshetra Samachara

15/04/2022 07:08 pm

Cinque Terre

4.8 K

Cinque Terre

0

ಸಂಬಂಧಿತ ಸುದ್ದಿ