ಉಡುಪಿ: ಉಡುಪಿಯಲ್ಲಿ ಇವತ್ತು ರಾಜ್ಯ ಸರಕಾರದ ವಿರುದ್ಧ ಮತ್ತು ಈಶ್ವರಪ್ಪ ವಿರುದ್ಧ ಭಾರೀ ಪ್ರತಿಭಟನೆ ನಡೆಯಿತು.ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಹುತಾತ್ಮ ಸೈನಿಕ ಸ್ಮಾರಕದ ಎದುರು ಪ್ರತಿಭಟನೆ ನಡೆಸಿದರು.ಪ್ರತಿಭಟನೆ ನೇತೃತ್ವವನ್ನು ಮಾಜಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ವಹಿಸಿದ್ದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಜಿ.ಪರಮೇಶ್ವರ್, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗ ಪ್ರಧಾನಮಂತ್ರಿ ಮೋದಿ ಅವರು 10% ಸರ್ಕಾರ ಎಂದು ಟೀಕೆ ಮಾಡಿದ್ದರು.
ಆದರೆ ಇವತ್ತು ರಾಜ್ಯದಲ್ಲಿ 40% ಸರ್ಕಾರ ಇದೆ ಎಂಬುದನ್ನು ಬಿಜೆಪಿ ಕಾರ್ಯಕರ್ತರು ಹೇಳುತ್ತಿದ್ದಾರೆ.ಗುತ್ತಿಗೆದಾರರ ಸಂಘದ ಅಧ್ಯಕ್ಷರು ಹೇಳುತ್ತಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ನೀವು ಅವತ್ತು ಹೇಳಿದ ಮಾತು ಎಲ್ಲಿ ಹೋಯಿತು? ಬಿಜೆಪಿ ಸರ್ಕಾರದ ವಿರುದ್ಧ ಯಾವ ಕ್ರಮ ಕೈಗೊಳ್ಳುತ್ತೀರಿ ? ಎಂದು ಜಿ. ಪರಮೇಶ್ವರ್ ಪ್ರಶ್ನಿಸಿದ್ದಾರೆ.ಈಶ್ವರಪ್ಪ ಅವರು ರಾಜೀನಾಮೆ ಕೊಟ್ಟಿರಬಹುದು. ಆದರೆ ಅವರನ್ನು ಬಂಧಿಸುವ ತನಕ ಕಾಂಗ್ರೆಸ್ ಪಕ್ಷ ರಾಜ್ಯದ ಮೂಲೆ ಮೂಲೆಯಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
Kshetra Samachara
16/04/2022 01:42 pm