ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: 'ಈಶ್ವರಪ್ಪರನ್ನು ಬಂಧಿಸಬೇಕು, ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಯಾಗಲಿ'

ಉಡುಪಿ: ಗುತ್ತಿಗೆದಾರ ಸಂತೋಷ್ ಪಾಟೀಲ ನಿಗೂಢ ಸಾವಿಗೆ ಸಂಬಂಧಿಸಿ ಕೆ.ಎಸ್. ಈಶ್ವರಪ್ಪ ಅವರು ರಾಜೀನಾಮೆ ಕೊಟ್ಟರೆ ಸಾಲದು. ಅವರನ್ನು ಬಂಧಿಸಬೇಕು, ಹೈಕೋರ್ಟ್ ನ್ಯಾಯಾಧೀಶರಿಗೆ ಪ್ರಕರಣದ ತನಿಖೆ ವಹಿಸಬೇಕು ಮತ್ತು ಸಂತೋಷ್ ಪಾಟೀಲ್ ಕುಟುಂಬಕ್ಕೆ ಸರಕಾರ ಪರಿಹಾರ ನೀಡಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಆಗ್ರಹಿಸಿದ್ದಾರೆ.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಡೆತ್ ನೋಟ್ ಸಿಕ್ಕಿದೆ. ಡೆತ್ ನೋಟ್‌ನಲ್ಲಿ ಸ್ಪಷ್ಟವಾಗಿ ನನ್ನ ಸಾವಿಗೆ ಈಶ್ವರಪ್ಪ ಕಾರಣ ಎಂದು ಬರೆದಿದ್ದಾರೆ. ನಾವು ಹೋರಾಟ ಮಾಡಿದ ನಂತರ ಅವರು ರಾಜೀನಾಮೆ ನೀಡಿದ್ದಾರೆ. ಆದರೆ ಅವರನ್ನು ಬಂಧಿಸುವ ತನಕ ಹೋರಾಟ ಮಾಡುತ್ತೇವೆ. ರಾಜ್ಯದಲ್ಲಿ 40 ಪರ್ಸೆಂಟ್ ಕಮಿಷನ್ ಸರಕಾರ ಇದೆ. ಸಚಿವರಿಗೆ ಸೂಕ್ತ ಶಿಕ್ಷೆ ಆಗುವ ಮೂಲಕ ರಾಜ್ಯದ ಜನತೆಗೆ ಸಂದೇಶ ನೀಡಬೇಕು. ಇದನ್ನು ನಾವು ಹೇಳುತ್ತಿಲ್ಲ.ಅಧಿಕೃತವಾಗಿ ನೋಂದಾವಣೆ ಆಗಿರುವ ಸಂಸ್ಥೆಯೇ 40 ಪರ್ಸೆಂಟ್ ಕಮಿಷನ್ ನಡೆಯುತ್ತಿದೆ ಎಂದು ಹೇಳಿದೆ. ಈ ಹಿನ್ನೆಲೆಯಲ್ಲಿ ಸಚಿವರನ್ನು ಬಂಧಿಸಲು ಬೇರೆ ಪುರಾವೆಯೇ ಬೇಕಿಲ್ಲ ಎಂದು ಅವರು ಹೇಳಿದ್ದಾರೆ.

Edited By : Manjunath H D
PublicNext

PublicNext

16/04/2022 05:40 pm

Cinque Terre

30.1 K

Cinque Terre

10

ಸಂಬಂಧಿತ ಸುದ್ದಿ