ಮಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಿದರಷ್ಟೇ ಸಾಲದು. ಅವರನ್ನು ಕೂಡಲೇ ಬಂಧಿಸಬೇಕು ಎಂದು ಅಖಿಲ ಭಾರತ ಹಿಂದೂ ಮಹಾಸಭಾದ ಅಧ್ಯಕ್ಷ ರಾಜೇಶ್ ಪವಿತ್ರನ್ ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಈ ಆಗ್ರಹ ಮಾಡಿದ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್, ರಾಜ್ಯದಲ್ಲಿ ನಾನಾ ರೀತಿಯಲ್ಲಿ ಹಿಂದೂ ಕಾರ್ಯಕರ್ತರ ಬಲಿ ಆಗುತ್ತಿದೆ. ಹಿಂದುತ್ವದ ಹೆಸರು ಹೇಳಿ ಅಧಿಕಾರಕ್ಕೆ ಬಂದವರಿಗೆ ಹಿಂದೂ ಕಾರ್ಯಕರ್ತರನ್ನು ಬಳಸಿಕೊಂಡು ಅಧಿಕಾರ ಪಡೆಯುವುದು ಮಾತ್ರ ಗೊತ್ತಿದೆ ಹೊರತು ಹಿಂದೂಗಳಿಗಾಗಿ ಏನೂ ಮಾಡಿಲ್ಲ ಎಂದು ದೂರಿದರು.
ಲಂಚ, ಮಂಚ ಮತ್ತು ಹಿಂದೂ ವಿರೋಧಿ ನೀತಿಗಳು ಮಾತ್ರ ಬಿಜೆಪಿ ಅಜೆಂಡಾ ಆಗಿದೆ. ಯಾವ ಉದ್ದೇಶಕ್ಕಾಗಿ ಅಧಿಕಾರಕ್ಕಾಗಿ ಬಂದಿದ್ದಾರೋ ಅದು ಸಾಕಾರ ಆಗುತ್ತಿಲ್ಲ. ಈಶ್ವರಪ್ಪರ ರಾಜೀನಾಮೆ ಒತ್ತಾಯದ ಮೇಲೆ ಆಗಿದ್ದು, ಇದು ಚುನಾವಣೆ ಹಿನ್ನೆಲೆಯಲ್ಲಿ ಬೂಟಾಟಿಕೆಯ ಕುತಂತ್ರ ಮಾತ್ರ ಎಂದು ಟೀಕಿಸಿದರು.
PublicNext
16/04/2022 08:32 pm