ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಈಶ್ವರಪ್ಪರನ್ನ ತಕ್ಷಣ ಬಂಧಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಪ್ರತಿಭಟನೆ

ಮಂಗಳೂರು: ಗುತ್ತಿಗೆದಾರ ಸಂತೋಷ ಪಾಟೀಲ್ ಪ್ರಕರಣ ಪ್ರಮುಖ ಆರೋಪಿ, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ತಕ್ಷಣವೇ ಬಂಧಿಸಬೇಕು ಎಂದು ಆಗ್ರಹಿಸಿ ನಗರದ ಕ್ಲಾಕ್ ಟವರ್ ಮುಂಭಾಗದಲ್ಲಿ ದ.ಕ.ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.

ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿರುವ ಕಾಂಗ್ರೆಸ್ ಈಶ್ವರಪ್ಪ ಅವರ ಪ್ರತಿಕೃತಿಯನ್ನು ಧರಿಸಿರುವ ವ್ಯಕ್ತಿಗೆ ಬೇಡಿ ಹಾಕಿ ಪ್ರತಿಭಟನೆ ನಡೆಸಿತು. ಬಳಿಕ ಈಶ್ವರಪ್ಪ ಪ್ರತಿಕೃತಿಯನ್ನು ಬೆಂಕಿ ಹಾಕಿ ಸುಡಲಾಯಿತು. ಅಲ್ಲದೆ 40% ಕಮಿಷನ್ ಕೇಳಿರುವ ಬಗ್ಗೆ ತನಿಖೆಯಾಗಲಿ. ಆದ್ದರಿಂದ ತಕ್ಷಣ ಈಶ್ವರಪ್ಪರನ್ನು ಬಂಧಿಸಿ, ತನಿಖೆ ನಡೆಸಲಿ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

Edited By : Manjunath H D
Kshetra Samachara

Kshetra Samachara

16/04/2022 08:47 pm

Cinque Terre

6.31 K

Cinque Terre

0

ಸಂಬಂಧಿತ ಸುದ್ದಿ