ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಸಮವಸ್ತ್ರದಲ್ಲಿ ಹಗರಣ: ಶಿಕ್ಷಣ ಸಚಿವರ ವಿರುದ್ಧ ಕ್ಯಾಂಪಸ್ ಫ್ರಂಟ್ ಪ್ರತಿಭಟನೆ!

ಉಡುಪಿ :ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸರಕಾರದಿಂದ ವಿತರಿಸುವ ಸಮವಸ್ತ್ರದಲ್ಲಿ ಬಹು ಕೋಟಿಯ ಹಗರಣ ಬೆಳಕಿಗೆ ಬಂದಿದ್ದು ಇದು ಶಿಕ್ಷಣ ಸಚಿವರ ಕಮಿಷನ್ ದಂಧೆಯಾಗಿದೆ. ನಿರಂತರ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಚೆಲ್ಲಾಟವಾಡುತ್ತಿರುವ ಶಿಕ್ಷಣ ಸಚಿವರಾದ ಬಿಸಿ ನಾಗೇಶ್ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಬಿ.ಇ.ಒ ಕಛೇರಿ ಮುಂಭಾಗ ಪ್ರತಿಭಟನೆ ನಡೆಯಿತು.

ಆರ್ ಟಿ ಇ ಕಾಯ್ದೆಯಡಿ ಬರುವ ವಿದ್ಯಾರ್ಥಿಗಳಿಗೆ 2019 ರ ಕರ್ನಾಟಕ ಉಚ್ಛ ನ್ಯಾಯಾಲಯದ ಆದೇಶದಲ್ಲಿ ಸರಕಾರವು ಹೊಲಿದ ಸಮವಸ್ತ್ರ ನೀಡಬೇಕೆಂದು ಹೇಳಿದೆ. ಈ ಹಿಂದೆ ಖಾಸಗಿ ಸಂಸ್ಥೆಗಳ ಮೂಲಕ ಸರಕಾರ ನೀಡಿದ್ದ ಟೆಂಡರ್ ಪ್ರಕಾರ ಕೇವಲ 230 ರೂ ಗೆ ಹೊಲಿದ ಎರಡು ಜೊತೆ ಸಮವಸ್ತ್ರ ಜೊತೆಗೆ ಶೂ, ಸೋಕ್ಸ್ ಹಾಗೂ ಟೈ ಕೂಡ ಎಸ್ ಡಿ ಎಂ ಸಿ ಮುಖಾಂತರ ವಿತರಣೆ ಮಾಡಲಾಗಿತ್ತು. ಇದರಿಂದ ಸ್ಥಳೀಯ ವ್ಯಾಪಾರಿಗಳಿಗೆ ಉದ್ಯೋಗವಾಗುತ್ತಿತ್ತು. ಆದರೆ ಇದೀಗ ಸರಕಾರವು ಎಸ್ ಡಿ ಎಂ ಸಿಯನ್ನು ಕಡೆಗಣಿಸಿ, ಕೇವಲ ಕಮಿಷನ್ ವ್ಯಾವೋಹದಿಂದ ಮಹಾರಾಷ್ಟ್ರ ಮೂಲದ ಕಂಪೆನಿಗೆ ಟೆಂಡರ್ ನೀಡಿ 250 ರೂ ಗಳಂತೆ ಹೊಲಿಯದ ಬಟ್ಟೆಯನ್ನು ನೀಡಲು ಮುಂದಾಗಿದೆ. ಈ ಮುಖಾಂತರ ಬಹುಕೋಟಿಯ ಹಗರಣ ನಡೆದಿದೆ ಎಂದು ಅಂದಾಜಿಸಲಾಗಿದೆ.

ಶಿಕ್ಷಣ ಸಚಿವರು ಈ ಹಗರಣದ ಹಿಂದೆ ಕಮಿಷನ್ ದಂಧೆ ನಡೆಸುತ್ತಿದ್ದು ಉಚ್ಛ ನ್ಯಾಯಾಲಯದ ತೀರ್ಪನ್ನು ಕೂಡ ಪರಿಗಣಿಸದೆ ನ್ಯಾಯಾಲಯದ ನಿಂದನೆ ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳ ಸಮವಸ್ತ್ರದಲ್ಲೂ ಕಮಿಷನ್ ದಂಧೆ ನಡೆಸಿ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಚೆಲ್ಲಾಟವಾಡುತ್ತಿರುವ ಶಿಕ್ಷಣ ಸಚಿವರು ಶೀಘ್ರ ರಾಜಿನಾಮೆ ನೀಡಬೇಕೆಂದು ಕ್ಯಾಂಪಸ್ ಫ್ರಂಟ್ ಒತ್ತಾಯಿಸಿತು.

Edited By : PublicNext Desk
Kshetra Samachara

Kshetra Samachara

18/04/2022 07:17 pm

Cinque Terre

10.57 K

Cinque Terre

3

ಸಂಬಂಧಿತ ಸುದ್ದಿ