ಉಡುಪಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಹುದ್ದೆಯ ನೇಮಕಾತಿಯಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಆರೋಪಿಸಿದೆ.
ಈ ಸಂಬಂಧ ಪಬ್ಲಿಕ್ ನೆಕ್ಸ್ಟ್ ಜೊತೆ ಮಾತನಾಡಿದ ದಸಂಸ ಮುಖಂಡ ರಮೇಶ್ ಕೋಟ್ಯಾನ್ ,ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಹುದ್ದೆಗಳ ನೇಮಕಾತಿಯಲ್ಲಿ ಸ್ವಜನಪಕ್ಷಪಾತ ಮತ್ತು ಅವ್ಯವಹಾರ ನಡೆದಿದೆ. ಈ ಸಂಬಂಧ ಮುಖ್ಯಮಂತ್ರಿಗಳಿಗೂ ದೂರು ಸಲ್ಲಿಸಿದ್ದೇವೆ. ಲಿಖಿತ ಪರೀಕ್ಷೆಯಲ್ಲಿ ಸಾಕಷ್ಟು ಗೋಲ್ಮಾಲ್ ನಡೆದಿದ್ದು ಇದರಿಂದಾಗಿ ಬಡ ಆಕಾಂಕ್ಷೆಗಳಿಗೆ ತೊಂದರೆ ಉಂಟಾಗಿದೆ.ಜನಪ್ರತಿನಿಧಿಗಳು ಮಾತುಮಾತಿಗೂ ಹಿಂದೂ ಹಿಂದೂ ಎಂದು ಹೇಳುತ್ತಿದ್ದಾರೆ.
ಸಮಾಜದ ಕೆಳವರ್ಗದ ಜನರು ಹಿಂದೂಗಳಲ್ಲವೇ? ಪರಿಶಿಷ್ಟ ಜಾತಿ ಮತ್ತು ಪಂಗಡದ ಆಕಾಂಕ್ಷಿಗಳು ಈ ಹುದ್ದೆಯ ನೇಮಕಾತಿ ಪರೀಕ್ಷೆ ಬರೆದರೂ ಅವರನ್ನು ನೇಮಕ ಮಾಡದೆ ಅನ್ಯಾಯ ಮಾಡಲಾಗಿದೆ. ತಕ್ಷಣ ನೇಮಕಾತಿಯ ಅವ್ಯವಹಾರವನ್ನು ಸಿಐಡಿ ತನಿಖೆಗೆ ಒಪ್ಪಿಸಬೇಕೆಂದು ದಲಿತ ಸಂಘರ್ಷ ಸಮಿತಿ ಮುಖಂಡ ಆಗ್ರಹಿಸಿದ್ದಾರೆ.
Kshetra Samachara
20/04/2022 05:59 pm